ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ : ಸಚಿವರಾದ ಶ್ರೀ ಈಶ್ವರ ಖಂಡ್ರೆ

ನಾಳೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಂದ ಬೀದರ ನಲ್ಲಿ ಐತಿಹಾಸಿಕ ₹2025 ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ, ಮತ್ತು 1.5 ವರ್ಷಗಳ ನಂತರ ಪುನಃ ಆರಂಭವಾಗುತ್ತಿರುವ ಬೀದರ ನಾಗರಿಕ ವಿಮಾನಯಾನ ಚಾಲನೆ ಕಾರ್ಯಕ್ರಮದ ಪ್ರಯುಕ್ತ, ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಬೀದರ ನೆಹರೂ ಸ್ಟೇಡಿಯಂ ಹಾಗೂ ಬೀದರ ವಿಮಾನ ನಿಲ್ದಾಣದಲ್ಲಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.