ಬೀದರ್

ಅಗಸ್ಟ್ 21 ರಂದು ಬೃಹತ ಉದ್ಯೋಗ ಮೇಳ ಆಯೋಜನೆ-ಸಚಿವ ಈಶ್ವರ.ಬಿ. ಖಂಡ್ರೆ

ಬೀದರ, ಆಗಸ್ಟ್ 11 (ಕರ್ನಾಟಕ ವಾರ್ತೆ)-ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಭೀಮಣ್ಣಾ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇವರ ಸಂಯುಕ್ತಾಶ್ರದಲ್ಲಿ ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ಶುಕ್ರವಾರ ಬೀದರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಕರೆದ ಉದ್ಯೋಗ ಮೇಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅನೇಕ ಯುವಕರು ನಿರೂದ್ಯೋಗಿಗಳಾಗಿ ಅಲೆದಾಡುವುದನ್ನು ಈ ಉದ್ಯೋಗ ಮೇಳದಿಂದ ತಪ್ಪಿಸಬಹುದು ಮತ್ತು ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ಮೇಳದಿಂದ ಉದ್ಯೋಗ ಅವಕಾಶಗಳು ದೊರೆಯಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಐಟಿಐ, ಡಿಪ್ಲೋಮಾ ಪದವಿಗಳನ್ನು ಪಡೆದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು. ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ಗ್ರಾಮೀಣ ಅಭ್ಯರ್ಥಿಗಳಾಗಿದ್ದರೆ ತಮ್ಮ ಹತ್ತಿರದ ಗ್ರಾಮ ಪಂಚಾಯತಿ ಮತ್ತು ನಗರ ಪ್ರದೇಶದ ಅಭ್ಯರ್ಥಿಗಳಾಗಿದ್ದರೆ ನಗರಸಭೆಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕೆAದರು.
ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು. ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಸೇರಿದಂತೆ ಐದು ಸಾವಿರ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಬರುವ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆಗಳನ್ನು ಮಾಡಲಾಗುವುದು. ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜುಗಳಲ್ಲಿ ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಮತ್ತು ಈ ಮೇಳದ ಸದಪಯೋಗವನ್ನು ಜಿಲ್ಲೆಯ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಪಡೆದುಕೊಳ್ಳಬೇಕು ಎಂದರು.
ಅಗಸ್ಟ್ 21 ರಂದು ನಡೆಯುವ ಉದ್ಯೋಗ ಮೇಳವು ವ್ಯವಸ್ಥಿತವಾಗಿ ನಡೆಯಲು ನೂಡಲ್ ಅಧಿಕಾರಿಗಳನ್ನು ನೆಮಿಸಬೇಕು ಮತ್ತು ಇದರಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ ಕ್ರಮವಹಿಸಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿವಿಧ ಕಂಪನಿಗಳ ಮಾಹಿತಿಯನ್ನು ಸ್ಪಸ್ಟವಾಗಿ ಅಭ್ಯರ್ಥಿಗಳಿಗೆ ತಿಳಿಯುವಂತೆ ಬ್ಯಾನರ್‌ಗಳನ್ನು ಬರೆಸಿ ಅಳವಡಿಸಬೇಕು ಹಾಗೂ ಜಿಲ್ಲೆಯಾದ್ಯಂತ ಮೇಳದ ಮಾಹಿತಿ ಕುರಿತ ಕರಪತ್ರಗಳನ್ನು ಮುದ್ರಸಿ ಹೆಚ್ಚಿನ ಪ್ರಚಾರ ನೀಡಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಪೌರಾಡಳಿ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಜಿಲ್ಲಾ ಕೈಗಾರಿಕ ಇಲಾಖೆಯ ಉಪ ನಿರ್ದೇಶಕರಾದ ಸುರೇಖಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸೇರಿದಂತೆ ಸಂಬAಧಿಸಿದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!