ಬೀದರ್

ಅಟ್ರಾಸಿಟಿ ಕಾಯ್ದೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಢಿಸಿ-ಅರವಿಂದಕುಮಾರ ಅರಳಿ

ಬೀದರ, ಆಗಸ್ಟ್ 2 – ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ನಿಯಮಗಳು ಮತ್ತು ಅಟ್ರಾಸಿಟಿ ಕಾಯ್ದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ( ದೌರ್ಜನ್ಯ ನಿಯಂತ್ರಣ ) ನಿಯಮಗಳು 1995 ರ ನಿಯಮ 17 ಮತ್ತು 17 (ಎ) ರೀತ್ಯ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಜಾತಿ ನಿಂದನೆಮಾಡಿ ಬೈಯುವುದು ಮತ್ತು ಕೀಳಾಗಿ ಅವರ ಬಗ್ಗೆ ಮಾತನಾಡುವುದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ ಮನುಷ್ಯರಾದ ನಾವೆಲ್ಲರೂ ಒಂದೇ ಆಗಿದ್ದೆವೆ ಹಾಗಾಗಿ ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು.
ಸಭೆಗೆ ಸಂಬAಧಿಸಿದ ಅಧಿಕಾರಿಗಳು ಎಲ್ಲರೂ ಕಡ್ಡಾಯವಾಗಿ ಬರಬೇಕು ಮತ್ತು ಯಾರು ಗೈರಾಗಬಾರದು ಅನುಸೂಚಿತ ಜಾತಿ ಹಾಗೂ ಪಂಗಡಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಬೇಕೆಂದರು.
ಸಭೆಯ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ, ಅನುಸೂಚಿತ ಜಾತಿ ಮತ್ತು ಪಂಗಡಗಳಿಗಾಗಿ ಇರುವ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಮತ್ತು ಜಾತಿ ತಾರತಮ್ಯ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು ಯಾರು ಇದನ್ನು ಮಾಡಬಾರದು ಎಂದರು.
ಬೀದರ ಜಿಲ್ಲೆಯಲ್ಲಿ ಜನವರಿ 1, 2023 ರಿಂದ ಇಲ್ಲಿಯವರೆಗೆ ಅನುಸೂಚಿತ ಜಾತಿ ಹಾಗೂ ಪಂಗಡಗಳ ಒಟ್ಟು 29 ಪ್ರಕರಣಗಳು ದಾಖಲಾಗಿದ್ದು ಅವುಗಳಲ್ಲಿ 24 ಜಾತಿ ನಿಂದನೆ, 2 ರೇಫ್ ಮತ್ತು 3 ಕೊಲೆ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರು ಸಭೆಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚನ್ಮಬಸವಣ್ಣ ಎಸ್.ಎಲ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹೇಶ ಮೇಘಣ್ಣವರ, ಪೊಲೀಸ್ ಉಪಾಧೀಕ್ಷಕರಾದ ಕೆ.ಎಂ. ಸತೀಶ, ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಟಿ.ಜೆ. ಹಾದಿಮನಿ ಮತ್ತು ಎಂ.ಎಸ್.ಕಟಗಿ ಹಾಗೂ ತಹಶಿಲ್ದಾರರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!