ಅನುಭವ ಮಂಟಪ ಕಾಮಗಾರಿ ವೀಕ್ಷಣೆ ಮಾಡಿದ ವಿಜಯಸಿಂಗ್
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿಜಯ್ ಸಿಂಗ್ ಅವರು ಇಂದು ಬಸವಕಲ್ಯಾಣ ತಾಲೂಕಿನ ನೂತನ ಅನುಭವ ಮಂಟಪ ಕಾಮಗಾರಿ ವೀಕ್ಷಣೆ ಮಾಡಿದರು. ನೂತನ ಅನುಭವ ಮಂಟಪ ಕಾಮಗಾರಿ ವೀಕ್ಷಣೆ ಮಾಡಿದ ವಿಜಯ್ ಸಿಂಗ್ ಈಗಾಗಲೇ ಅನುಭವ ಮಂಟಪ ಕಾಮಗಾರಿ ಅತ್ಯುತ್ತಮವಾಗಿ ಮೂಡಿ ಬಂದಿದೆ, ಇನ್ನು ಕೆಲವೇ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.