ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಸಮಾರಂಭ
ಕಾಂಗ್ರೆಸ್ ಪಕ್ಷದ ಹಿರಿಯರು, ಮುಖಂಡರು, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ ಅವರು ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಜಗದೇವ ಗುತ್ತೇದಾರ ಅವರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ, ಅಭಿನಂದನೆಗಳನ್ನು ಸಲ್ಲಿಸಿದೆ.ಮೆರವಣಿಗೆ ಉದ್ದಕ್ಕೂ ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಅಭಿಮಾನಿಗಳು ಸಂಭ್ರಮಿಸಿದರು.ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ಜಗದೇವ ಗುತ್ತೇದಾರ ಅವರ ಹಿತೈಷಿಗಳು ಉಪಸ್ಥಿತರಿದ್ದರು.