ಬೀದರ್

ಆಗಸ್ಟ್ 15 ರ ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಿ- ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ, ಆಗಸ್ಟ್ 3 – ಆಗಸ್ಟ್ 15 ರ ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ಕಛೇರಿಗಳಲ್ಲಿ ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಸ್ವಾತಂತ್ರ‍್ಯೊತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವು ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಲಾಗುತ್ತದೆ. ಮುಂಚಿತವಾಗಿ ವಿವಿಧ ಇಲಾಖೆ ಹಾಗೂ ಶಾಲಾ, ಕಾಲೇಜುಗಳಲ್ಲಿ ಅಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ 9 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಲ್ಲರೂ ಬರಬೇಕು ಎಂದರು.
ಕಳೆದ ವರ್ಷ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮ ಇರುವುದರಿಂದ ಅದ್ದೂರಿಯಾಗಿ ಆಚರಿಸಲಾಯಿತು ಆದರೆ ಈ ವರ್ಷ ಆ ಕಾರ್ಯಕ್ರಮ ಇರದಿದ್ದರೂ ಸರಕಾರಿ ಕಛೇರಿ ಮತ್ತು ನಗರದ ವಿವಿಧ ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಹಾಗೂ ಇತರೆ ವೃತ್ತಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ದೀಪಾಲಂಕಾರ ಮಾಡಬೇಕೆಂದರು.
ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅಂದು ಸಂಜೆಯು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡಬೇಕು ಹಾಗೂ ಪ್ರಬಂಧ ಮತ್ತು ಭಾಷಣ ಸ್ಪರ್ದೆಗಳನ್ನು ಏರ್ಪಡಿಸಿ ಶಾಲಾ ಹಂತಗಳಲ್ಲಿಯೇ ಅವರಿಗೆ ಬಹುಮಾನಗಳನ್ನು ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಕಾರ್ಯಕ್ರಮಕ್ಕೆ ಬರುವ ಶಾಲಾ ಮಕ್ಕಳಿಗೆ ನೀರು ಮತ್ತು ಅಲ್ಪ ಉಪಹಾರದ ವ್ಯವಸ್ಥೆ ಮಾಡುವಂತೆ ನಗರಸಭೆಯ ಅಧಿಕಾರಿಗಳಿಗೆ ನಿರ್ದೆಶನ ನೀಡಿದರು. ಸಭೆಯಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಜಿಲ್ಲೆಯಲ್ಲಿ ಯಾರು ಬಳಸದಂತೆ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಶಾಲಾ, ಕಾಲೇಜುಗಳಲ್ಲಿ ಬಟ್ಟೆಯ ಧ್ವಜಗಳನ್ನೆ ಎಲ್ಲರೂ ಬಳಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚೆನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಎಲ್ಲರೂ ರಾಷ್ಟ್ರ ಧ್ವಜವನ್ನು ಗೌರವದಿಂದ ಹಾರಿಸಬೇಕು. ಧ್ವಜಾರೋಹಣ ಹೇಗೆ ಮಾಡಬೇಕು ಎಂಬುದರ ಕುರಿತು ಆಗಸ್ಟ್ 13 ನೇ ತಾರೀಖು ಜಿಲ್ಲಾ ಕ್ರೀಡಾಂಗಣದಲ್ಲಿ ರಿಹರ್ಸಲ್ ಇರಲಿದ್ದು ಇದರಲ್ಲಿ ಆಸಕ್ತರು ಭಾಗವಹಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ವಿವಿಧ ಶಾಲಾ ಮತ್ತು ಕಾಲೇಜುಗಳ ಮಕ್ಕಳ ಮಾಹಿತಿಯನ್ನು ಮುಂಚಿತವಾಗಿ ಹೇಳಿದರು ಟ್ರಾಫಿಕ್ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುತ್ತದೆ ಮತ್ತು ಮಕ್ಕಳನ್ನು ಶಾಲಾ ವಾಹನಗಳಲ್ಲಿ ಕರೆತರಬೇಕೆಂದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾAತ ಶಾಬಾದಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣಪತಿ ಡಿ.ಕೆ., ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ವಿರುಪಾಕ್ಷ ಗಾದಗಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!