ಇನ್ಮುಂದೆ ‘ಡಾಕ್ಟರ್’ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನುಮುಂದೆ ಡಾಕ್ಟರ್ ಬಿ.ಎಸ್.ಯಡಿಯೂರಪ್ಪ. ಅರ್ಥಾತ್, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಇಂದು ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಇಂದು ಬಿಎಸ್ವೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಬಿಎಸ್ವೈಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಈ ಘಟಿಕೋತ್ಸವದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗದ 409 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 101 ವಿದ್ಯಾರ್ಥಿಗಳು ಸ್ನಾತಕೋತ್ತರ ಹಾಗೂ 23 ವಿದ್ಯಾರ್ಥಿಗಳು ಪಿಎಚ್ಡಿ ಪದವಿಗೆ ಪಾತ್ರರಾದರು. ಅತ್ಯುತ್ತಮ ಸಾಧನೆ ಮಾಡಿದ ಎಂಟು ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾದರು.