ಒಂದು ಗ್ರಾಮ ಒಂದು ಕ್ರೀಡೆ ಯೋಜನೆಯಡಿ ಸ್ಥಳಿಯ ಕ್ರೀಡೆಗಳಿಗೆ ಪ್ರೋತ್ಸಾಹ -:ಸಚಿವ ಬಿ. ನಾಗೇಂದ್ರ
ಬೀದರ, ಜುಲೈ 26 – ಒಂದು ಗ್ರಾಮ ಒಂದು ಕ್ರೀಡೆ ಯೋಜನೆಯಡಿ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿರುವ ಮಹತ್ವದ ಸ್ಥಳಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಪರಿಶಿಷ್ಠ ಪಂಗಡಗಳ ಕಲ್ಯಾಣ ಮತ್ತು ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಬಿ. ನಾಗೇಂದ್ರ ಹೇಳಿದರು.
ಅವರು ಬುಧವಾರ ಬೀದರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಬೀದರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಕ್ರೀಡಾ ಇಲಾಖೆ, ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಪ್ರಗತಿ ಪರಿರಿಗೆ ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ನೇಮಕಾತಿಗಳಲ್ಲಿ ಇರುವ ಮೀಸಲಾತಿ ವಿಧಾನವನ್ನು ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಯಲ್ಲಿ ಜಾರಿಗೆ ತರುವ ಉದ್ದೇಶವಿದೆ. ರಾಜ್ಯದಲ್ಲಿ ಕ್ರೀಡಾ ತರಬೇತುದಾರರ ಕೊರತೆ ಇದ್ದು ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರನ್ನು ಹೆಚ್ಚುವರಿಯಾಗಿ ಅವರ ಸೇವೆಯನ್ನು ಪಡೆಯಲು ನಿರ್ಧರಿಸಲಾಗಿದ್ದು ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಸಚಿವನಾದ ಮೇಲೆ ಪ್ರಥಮ ಬಾರಿಗೆ ಬೀದರ ಜಿಲ್ಲೆಗೆ ಭೇಟಿ ನೀಡಿದ್ದು ಇಲ್ಲಿಂದಲೇ ನಮ್ಮ ಇಲಾಖೆಯ ಮೊದಲ ಕಾರ್ಯಕ್ರಮ ಆರಂಭಿಸಿದ್ದು. ಜಿಲ್ಲೆಯಲ್ಲಿರು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬAಧಿಸಿದ ನೂನ್ಯತೆಗಳನ್ನು ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಬಗೆಹರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಒಳಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಲೈಟಿಂಗ್, ಗೋಡೆ ಸೊರುವಿಕೆ ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ ಹಾಗೂ ಬೀದರನಲ್ಲಿರುವ ಈಜು ಕೊಳದ ಸ್ವಚ್ಛತೆಗೆ ಸಂಬAಧಿಸಿದAತೆ ಸಹ ದೂರುಗಳ ಬಂದಿವೆ ಮುಂದಿನ ದಿನಗಳ ಸೂಸರ್ಜಿತ ಒಳಕ್ರೀಡಾಂಗಣ ನಿರ್ಮಿಸಿ ಅದರಲ್ಲಿ ಈಜು ಕೋಳ ನಿರ್ಮಿಸುವ ಉದ್ದೇಶ ಇದೆ ಎಂದರು.
ಭಾಲ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಿಸುವಂತೆ ಮನವಿ ಬಂದಿವೆ ಈ ಹಿನ್ನೆಲೆಯಲ್ಲಿ ಅಲ್ಲಿ ಒಂದು ತಾಲ್ಲೂಕು ಮಟ್ಟದ ಸೂಸರ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ಮುಂದೆ ಮತ್ತೆ ಜಿಲ್ಲೆಗೆ ಬಂದಾಗ ಭಾಲ್ಕಿಗೆ ಭೇಟಿ ನೀಡಿ ಕ್ರೀಡಾಂಗಣದ ನಿವೇಶದ ಕುರಿತು ಚರ್ಚಿಸಲಾಗುವುದೆಂದರು.
ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ನಿಗಮದಿಂದ ಸಿಗುವ ಎಲ್ಲಾ ಸೌಲಭ್ಯವನ್ನು ಜನರಿಗೆ ಸಿಗುವಂತಾಗಬೇಕು. ಈ ಇಲಾಖೆಯ ಅಡಿಯಲ್ಲಿರುವ ಯೋಜನೆ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ರವಾನೆ ಮಾಡಬೇಕು. ಇಲಾಖೆಯಲ್ಲಿರುವ ಹಣ ಪೋಲಾಗದಂತೆ ನೋಡಿಕೊಳ್ಳಬೇಕು ಎಲ್ಲಾ ಕೆಲಸಗಳು ಅಚ್ಚುಕಟ್ಟಾಗಿ ನಡೆಯಬೇಕಾದರೆ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿ ಸರ್ಕಾರ ಜಾರಿಗೆ ಮಾಡಿದ ಮೇನುವಿನ ಪ್ರಕಾರವೇ ಅವರಿಗೆ ಉತ್ತಮ ಗುಣಮಟ್ಟದ ಅಹಾರ ಒದಗಿಸಬೇಕು. ಕಳಪೆ ಮಟ್ಟದ ತರಕಾರಿಯನ್ನು ಬಳಸಬಾರದು. ಹಾಗೂ ಹಾಸ್ಟಲ್‌ನಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಂದ ದೂರು ಬರದಂತೆ ಎಲ್ಲರೂ ನಿಗಾವಹಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆಯಿಂದ ಹೊಬಳಿ ಮಟ್ಟದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಚಾಲನೆಗೆ ನಿವೇಶನದ ಕೊರತೆ ಇದೆ ಎಂದು ಜಿಲ್ಲಾ ಪರಿಶಿಷ್ಠ ಪಂಗಡಗಳ ಕಲ್ಯಾಣಾಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ ಆ ಸ್ಥಳಗಳಲ್ಲಿ ಸರ್ಕಾರಿ ಜಮೀನು ಇದ್ದಲ್ಲಿ ಅದನ್ನು ಬಳಸಿಕೊಳ್ಳಿ ಇಲ್ಲದಿದ್ದರೆ ಸ್ಥಳಿಯ ಶಾಸಕರ ಗಮನಕ್ಕೆ ತಂದು ಬೇರೆ ಕಡೆ ಭವನ ನಿರ್ಮಾಣ ಸ್ಥಳಾಂತರಿಸಿ ಎಂದರು.
ಸಚಿವರು ಜಿಲ್ಲಾ ಕ್ರೀಡಾಂಗಣ ಹಾಗೂ ಒಳಕ್ರೀಡಾಂಗಣಕ್ಕೆ ಭೇಟಿ ನೀಡಿ ಕ್ರೀಡಾಪಟುಗಳೊಂದಿಗೆ ಸಮಾಲೋಚನೆ ನಡೆಸಿ ಅಲ್ಲಿನ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು. ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದರು. ನಂತರ ರಾಜಗೊಂಡ ಕಾಲೋನಿ ಭೇಟಿ ಹಾಗೂ ಪರಿಶಿಷ್ಠ ಪಂಗಡಗಳ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಅಹಾರ ಮತ್ತು ಅಲ್ಲಿನ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ವಿಧಾನ ಪರಿಷತ ಸದಸ್ಯರುಗಳಾದ ಅರವಿಂದಕುಮಾರ ಅರಳಿ, ಡಾ.ಚಂದ್ರಶೇಖರ ಪಾಟೀಲ್,ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರಾದ ಎನ್. ಶಶಿಕುಮಾರ, ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕಲ್ಲೇಶಪ್ಪ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮನಾಭ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಗೌತಮ ಅರಳಿ ಹಾಗೂ ಬೀದರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪರಿಶಿಷ್ಠ ಪಂಗಡ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.