ಕಚೇರಿ ಎದುರು ಉಗ್ರವಾದ ಧರಣಿ ಸತ್ಯಾಗ್ರಹ ಮಾಡಲಾಗುವುದುದ ಲಿತ ಸೇನೆ ಮತ್ತು ದಲಿತ ಸಂಘರ್ಷ ಸಮಿತಿ
ಬೀದರ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಬೀದರ ಸಮನ್ವಯ ಅಧಿಕಾರಿಗಳು ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಶರಣಪ್ಪ ಬಿರಾದಾರ ಹಾಗೂ ಇನ್ನಿರ್ವ ಪ್ರಾಂಶುಪಾಲರಾದ ಚೆನ್ನಬಸವ ಹೆಡೆ ಇವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಮನಸಿಗೆ ಬಂದAತೆ ಕಾರ್ಯ ನಿರ್ವಹಿಸುತ್ತಿದ್ದಾರೆ, ಮೂರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತಮ್ಮ ಮನಸಿಗೆ ಬಂದ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ, ಇಲಾಖೆಯ ಶೈಕ್ಷಣಿಕ ಹಿತ ದೃಷ್ಟಿಯಿಂದ ಅವರನ್ನು ಬೇರೆ ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿ ಅಂದರೆ ಬಗದಲ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚೆನ್ನಬಸವ ಹೆಡೆ ಅವರನ್ನು ಆಟಲ ಬಿಹಾರಿ ವಾಜಪೇಯಿ ವಸತಿ ಶಾಲೆ ಘೋಡಂಪಳ್ಳಿಗೆ ವರ್ಗಾಯಿಸಿ ಹಾಗೂ ಘೋಡಂಪಳ್ಳಿ ಶಾಲೆಯಿಂದ ಬಗದಲ ಶಾಲೆಗೆ ಶರಣಪ್ಪ ಬಿರಾದಾರ ಅವರಿಗೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದ್ದಾರೆ, ಆದರೆ ಇದನ್ನು ಧಿಕ್ಕರಿಸಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮೊದಲು ನಿರ್ವಹಿಸುತ್ತಿರುವ ಈಗಲೂ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಗಾಗಿ ಸರ್ಕಾರದ ನಿಯಮವನ್ನು ಪಾಲಿಸದೆ ಕಾರ್ಯ ನಿರ್ವಹಿಸುತ್ತಿರುವ ಈ ಸದರಿ ಅಧಿಕಾರಿಯನ್ನು ಅಮಾನತ್ತು ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ತಮ್ಮ ಕಚೇರಿ ಎದುರು ಉಗ್ರವಾದ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ದಲಿತ ಸೇನೆ ಮತ್ತು ದಲಿತ ಸಂಘರ್ಷ ಸಮಿತಿ ಕರ್ನಾಟಕ ಎಚ್ಚರಿಸುತ್ತದೆ.