ಬೀದರ್

ಕನ್ನಡ ಜೀವಂತವಾಗಿ ಉಳಿಯಲು ಎಲ್ಲರೂ ಕೆಲಸ ಮಾಡಬೇಕಿದೆ- ಡಾ. ಪುರುಷೋತ್ತಮ ಬಿಳಿಮಲೆ

ಬೀದರ, ಜುಲೈ.14 : ಕನ್ನಡ ಜೀವಂತವಾಗಿ ಉಳಿಯಲು ಎಲ್ಲರೂ ಕೆಲಸ ಮಾಡಬೇಕಿದೆ ಹಾಗಾಗಿ ಇಂದು ಎಲ್ಲಾ ಕನ್ನಡ ಪರ ಸಂಘಟನೆಗಳ ಸಭೆ ಕರೆದು ತಮ್ಮ ಸಲಹೆ ಮತ್ತು ಸೂಚನೆಗಳನ್ನು ಪಡೆಯಲಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಅವರು ಭಾನುವಾರ ಪೂಜ್ಯ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮAದಿರ ಬೀದರನಲ್ಲಿ ಕನ್ನಡ ಅನುಷ್ಠಾನದ ಕುರಿತು ಜಿಲ್ಲೆಯ ವಿವಿಧ ಕನ್ನಡ ಪರ ಸಂಘಟನೆಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು. ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಕನ್ನಡ ಜೀವಂತವಾಗಿ ಉಳಿಯಲು ಕೆಲಸ ಮಾಡುತ್ತಿವೆ ಹಾಗಾಗಿ ನಾನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪರವಾಗಿ ತಮ್ಮೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೆನೆ. ಬೀದರ ಜಿಲ್ಲೆಯಲ್ಲಿ ಕನ್ನಡ ಪರೀಣಾಮಕಾರಿಯಾಗಿ ಅನುಷ್ಠಾನವಾಗದೆ ಎನಾದರು ಲೋಪ ದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ನಾಳೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ಸಿ ಮತ್ತು ಡಿ ಗ್ರೂಫಗಳಲ್ಲಿ ಕನ್ನಡಿಗರಿಗೆ ಶೇ. 80 ಪ್ರತಿಶತ ಉದ್ಯೋಗ ಸಿಗಬೇಕಿದೆ. ಸರೋಜನಿ ಮಹೀಸಿ ವರದಿ ಇನ್ನು ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕಿದೆ. ಕನ್ನಡ ಜೀವಂತವಾಗಿ ಉಳಿಯಬೇಕಾದರೆ ಕನ್ನಡ ಪರ ಚಿಂತನೆಗಳು. ವಿಚಾರ ವಿನಿಮಯ ನಡೆಯಬೇಕಿದೆ. ಕನ್ನಡವನ್ನು ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದು ನಮ್ಮ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ ಹಾಗಾಗಿ ಎಲ್ಲಾ ಕಡೆ ಹೋಗಿ ಕನ್ನಡದ ಕುರಿತು ವಿಚಾರ ವಿನಿಮಯ ಮಾಡಲಾಗುತ್ತಿದೆ ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಅವರು ಮಾತನಾಡಿ, ಪ್ರತಿ ಜಿಲ್ಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹೋಗಿ ವಿವಿಧ ಕನ್ನಡ ಪರ ಸಂಘಟನೆಗಳ ಸಭೆ ಕರೆಯುವ ಉದ್ದೇಶ ಸರಕಾರದ ಆದೇಶ ವಿವಿಧ ಇಲಾಖೆಗಳಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನ ಆಗುತ್ತಿದೆಯಾ ಎನ್ನುವುದರ ಕುರಿತು ತಮ್ಮೆಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎನಾದರು ಲೋಪಗಳಾಗಿದ್ದರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳ ಸಭೆ ಕರೆದು ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ಅವರು ಮಾತನಾಡಿ, ಕನ್ನಡ ನಾಮಫಲಕಗಳು ಎಲ್ಲಾ ಕಡೆ ಪರೀಣಾಮಕಾರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಗಡಿ ಭಾಗದ ಬಹಳಷ್ಟು ಕನ್ನಡ ಶಾಲೆಗಳಲ್ಲಿ ಕನ್ನಡ ಬೋರ್ಡಗಳು ಇಲ್ಲಾ. ಮತ್ತು ಕನ್ನಡ ಶಾಲೆಗಳ ಅನುಮತಿಗೆ ನಿಯಮಗಳು ಸಡಿಲಿಕೆ ಆಗಬೇಕಿದೆ ಅಂದಾಗ ಗಡಿ ಭಾಗದಲ್ಲಿ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಸಿದ್ರಾಮ ಶಿಂಧೆ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ್ ಸೋನಾರೆ, ಶಿವಕುಮಾರ ಕಟ್ಟಿ. ಎಸ್.ಬಿ.ಕುಚಬಾಳ, ಪಾರ್ವತಿ ಸೋನಾರೆ, ಭಾರತಿ ವಸ್ತ್ರದ, ಸಾಹಿತಿ ಡಾ. ಎಂ. ದೇಶಪಾಂಡೆ. ಸಂತೋಷ ಕುಮಾರ ಜೋಳದಾಪೆ, ಸಿದ್ದಾರೂಢ ಭಾಲ್ಕಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!