ಕರ್ತವ್ಯದಲ್ಲಿ ನಿರ್ಲಕ್ಷೃ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ : MLA ಡಾ ಶೈಲೇಂದ್ರ ಬೆಲ್ದಾಳೆ
ಸಾರ್ವಜನಿಕ ಆಸ್ಪತ್ರೆಗೆ ಶಾಸಕರಾದ ಡಾ ಶೈಲೇಂದ್ರ ಬೆಲ್ದಾಳೆ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ಕರ್ತವ್ಯದಲ್ಲಿ ನಿರ್ಲಕ್ಷೃ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಎಂದು ಎಚ್ಚರಿಕೆ ನೀಡಿದರು.
ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ವೈದ್ಯರು, ಸಿಬ್ಬಂದಿ ನಿಷ್ಕಾಳಜಿ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಹಲವು ರೋಗಿಗಳು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ದೂರಿದರೆ ಕೆಲವರು ಆಸ್ಪತ್ರೆಗೆ ಚಿಕಿತ್ಸೆಗೆ ಬರಲು ಹೇಳಿ ವೈದ್ಯರೇ ಬಂದಿಲ್ಲ ಎಂದು ತಮ್ಮ ಅಳಲು ಹೇಳಿಕೊಂಡರು.
ಬಳಿಕ ಶಾಸಕರು ಆಸ್ಪತ್ರೆಯ ಎಲ್ಲ ವೈದ್ಯರ ಸಿಬ್ಬಂದಿಗಳ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಆಸ್ಪತ್ರೆ ಸ್ವಚ್ಛತೆ ಹಾಗೂ ಚಿಕಿತ್ಸೆ ಕುರಿತು ಮಾಹಿತಿ ಪಡೆದು ಸಾರ್ವಜನಿಕರಿಗೆ ಉತ್ತಮವಾಗಿ ಸ್ಪಂದಿಸಿ ಚಿಕಿತ್ಸೆ ನೀಡಬೇಕು ಯಾವುದೇ ಕಾರಣಕ್ಕೂ ದೂರು ಬರದಂತೆ ನೋಡಿಕೊಳ್ಳಬೇಕು ಆಸ್ಪತ್ರೆಗೆ ಅವಶ್ಯಕತೆ ಇರುವ ಸೌಲಭ್ಯಗಳ ಕೊರತೆ ಕುರಿತು ಮಾಹಿತಿ ನೀಡಿ ಮೇಲ ಅಧಿಕಾರಿಗಳಿಗೆ ಸೂಚನೆ ನೀಡಿ ಒದಗಿಸಿಕೊಡಲಾಗುವುದು ಎಂದರು.
ಬಳಿಕ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಉತ್ತಮವಾಗಿ ಕೆಲಸ ಮಾಡುವಂತೆ ಸೂಚಿಸಿದರು
ಮನ್ನಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು ಹಾಗೂ ನೂತನವಾಗಿ ನಿರ್ಮಾಣವಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಕಾಮಗಾರಿ ಕುರಿತು ಮಾಹಿತಿ ಪಡೆದು ತ್ವರಿತವಾಗಿ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಸೂಚಿಸಿದರು. ಬಳಿಕ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.
ಆಸ್ಪತ್ರೆಯಲ್ಲಿ ಟಿಎಚ್ ಒ ಸಂಗಾರೆಡ್ಡಿ, ವೈದ್ಯರಾದ ಸೂರ್ಯಕಾಂತ, ಭೂಷಣ್ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.