ಕರ್ನಾಟಕ ಪ್ರಜಾ ಶಕ್ತಿ ಸಮಿತಿ ವತಿಯಿಂದ ಮನವಿ
ಬೀದರ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಛೇರಿಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಹುದ್ದೆ ನೇಮಕಾತಿ ಮಾಡುವ ಬಗ್ಗೆ ಮತ್ತು ಮೂಲ ಹುದ್ದೆಯಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪೋಲಾ ಅಭಿಷೇಕ ಇವರನ್ನು ಬೀದರ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುವುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ ಪ್ರಜಾ ಶಕ್ತಿ ಸಮಿತಿ (ರಿ) ಜಿಲ್ಲಾ ಘಟಕದವತಿಯಿಂದ ಗಮನಕ್ಕೆ ತರಬಯಸುವುದೇನೆಂದರೆ, ಬೀದರ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಬೀದರ ಕಛೇರಿಯಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಾಹಕ ಅಭಿಯಂತರರ ಹುದ್ದೆಯಲ್ಲಿ ಯಾವುದೇ ಅಧಿಕಾರಿಯನ್ನು ಇಲ್ಲದ ಕಾರಣ ಬೀದರ ಜಿಲ್ಲೆಯ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿರುವುದು ನಮ್ಮ ಮೇಲ್ನೋಟಕ್ಕೆ ಕಂಡು ಬರುತ್ತಿದ್ದೆ. ಆದಷ್ಟು ಬೇಗನೆ ಖಾಲಿ ಇದ್ದ ಹುದ್ದೆಯನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ವಿನಂತಿ.
ಬೀದರ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಬೀದರ ಕಛೇರಿಯಲ್ಲಿ ಸುಮಾರು ವರ್ಷಗಳಿಂದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಅವರು ಬೀದರ ಸ್ಥಳಿಯ ಇದ್ದ ಕಾರಣ ಕಛೇರಿಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ. ಸಾರ್ವಜನಿಕರು ಕಛೇರಿಗೆ ಬೇಟ್ಟಿ ಕೊಟ್ಟು ಅಲ್ಲಿ ಅವರು ಇಲ್ಲದ ಕಾರಣ ಅವರಿಗೆ ದೂರವಾಣಿ ಕರೆ ಮಾಡಿದರೆ ಕೆಲಸದ ಮೇಲೆ ಅಲ್ಲಿ ಇಲ್ಲಿಗೆ ಹೋಗಿರುತ್ತೇನೆಂದು ಹಾರಿಕೆ ಉತ್ತರವನ್ನು ನೀಡುತ್ತಿದ್ದಾರೆ. ಹಾಗೂ ಸ್ಥಳಿಯವಾಗಿರುವ ಕಾರಣ ರಾಜಕೀಯನ್ನು ಮಾಡುತ್ತಿದ್ದಾರೆ. ಹಾಗೂ ಸದರಿ ಇಲಾಖೆಯಿಂದ ಬೀದರ ಜಿಲ್ಲೆಯಲ್ಲಿ ಕಳಪೆ ಮಟ್ಟದ ಕಾಮಗಾರಿಯನ್ನು ಮಾಡಿರುತ್ತಾರೆ.
ಸಂಬAಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿ ಅವರ ಅವಧಿಯಲ್ಲಿ ಮಾಡಿರುವ ಕಾಮಗಾರಿಗಳನ್ನು ಕುಲಂಕುಷವಾಗಿ ಪರಿಶೀಲನೆ ಮಾಡಿ ತಪ್ಪಿಸ್ಥರ ಮೇಲೆ ಕಾನೂನಿನ ಸೂಕ್ತ ಕ್ರಮ ಕೈಗೊಂಡು ಬೀದರ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕೆಂದು ಎಂದು ಎಚ್ಚರಿಸಿ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷರಾದ ಸಾಯಿ ಶಿಂಧೆ, ಮಹೇಂದ್ರಕುಮಾರ ಹೊಸಮನಿ. ಬಸವರಾಜ ಭಾವಿದೊಡ್ಡಿ, ವಿನೋದಕುಮಾರ ಶಿಂಧೆ, ಧನರಾಜ ಮೇತ್ರೆ, ಶಿವು ಮಡಿವಾಳ, ಗುರು ನೆಮತಾಬಾದ, ರಮೇಶ ಪಾಸ್ವಾನ್, ಆಕಾಶ ತ್ರಿಮುಕೆ, ಪುಟ್ಟರಾಜ ಧಿನೆ, ರಾಹುಲ q