ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಮಗದ ಕೇಂದ್ರ ಕಛೇರಿ ಉದ್ಘಾಟನೆ
ಬೀದರ್ ಜುಲೈ 08 ಃ ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದಿಂದ ಮೀನುಗಾರರಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಅರಣ್ಯ, ಜಿವಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಇತ್ತಿಚೆಗೆ ಮಂಗಳೂರಿನ ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದ ಕೇಂದ್ರ ಕಛೇರಿಗೆ ಭೇಟಿ ನೀಡಿ ಅಧ್ಯಕ್ಷರ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ದಿ. ಬಿ. ನಾರಾಯಣರಾವ್ ಅವರು ಶಾಸಕರಾಗಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಾ ಇದ್ದರು. ಅವರು ನಮ್ಮಿಂದ ಆಗಲಿ ಹೊಗಿದ್ದಾರೆ. ಅವರ ನಿಧನದ ನಂತರ ಶ್ರೀಮತಿ ಮಾಲಾ ಬಿ. ನಾರಾಯಣ ಅವರ ಸೇವೆಯನ್ನು ಗುರುತಿಸಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಈಶ್ವರ ಬಿ. ಖಂಡ್ರೆ ತಿಳಿಸಿದರು. ಇದೆ ಸಂದರ್ಭದಲ್ಲಿ ಸಚಿವರು ನಿಗಮದ ಅಧ್ಯಕ್ಷರಿಗೆ ಶುಭ ಕೋರಿದರು.
ನಂತರ ಮಂಗಳೂರಿನ ಮೀನುಗಾರಿಕಾ ಬಂದರು, ಮಂಜುಗಡ್ಡೆ ಸ್ಥಾವರ, ಡೀಸಿಲ್ ಬಂಕ್ಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಮತಿ ಮಮತಾ ಡಿ.ಎಸ್.ಗಟ್ಟಿ, ಮೂಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ರಾಜೀವಗಾಂಧಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಯು.ಟಿ. ಇಫ್ತೀಕರ್ ಫರೀದ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.