ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ-ಸಚಿವ ದಿನೇಶ ಗುಂಡೂರಾವ್
ಬೀದರ. ಆಗಸ್ಟ್.23- ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಬೀದರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಾ ಸಭೆ ನಡೆಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ನಡೆಯದಂತೆ ನಿಗಾವಹಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರ್ಭಿಣಿಯರು ರಕ್ತ ಹೀನತೆಯಿಂದ ಹೆಚ್ಚಾಗಿ ಬಳಲುತ್ತಿರುವ ಶಂಕೆ ಇದೆ ಈ ಹಿನ್ನೆಲೆಯಲ್ಲಿ ಎಚ್ಚರ ವಹಿಸಿ ಹೆಚ್ಚಿನ ಪರಿಕ್ಷೇಗಳನ್ನು ನಡೆಸಿ ಇಂತಹ ಲಕ್ಷಣ ಕಂಡುಬರುವ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಯಾರು ಸಹ ಇದರ ಬಗ್ಗೆ ನಿರ್ಲಕ್ಷ ತೋರಬಾರದು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಮುಂಬರುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳಿಗೆ ನೀಡಲಾಗುವ ಲಸಿಕೆಗಳನ್ನು ಸಮಯಕ್ಕೆ ಸರಿಯಾಗಿ ನೀಡುವಂತೆ ಅರೋಗ್ಯ ಅಧಿಕಾರಿಗಳು ನಿಗಾವಹಿಸಬೇಕು ಎಂದರು.
ಆರೋಗ್ಯ ಇಲಾಖೆಯಡಿ ಜಾರಿಯಲ್ಲಿರುವ ಕಾರ್ಯಕ್ರಮದಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಡಿಮೆ ತೂಕ ಹೊಂದಿದ ನವಜಾತ ಶಿಶುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಹಾಗೂ ರಾತ್ರಿ ಹೊತ್ತು ಇರುವುದಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಬರುತ್ತಿವೆ ಮುಂದೆ ಹೀಗೆ ಆಗದಂತೆ ಅರೋಗ್ಯ ಅಧಿಕಾರಿಗಳು ಕ್ರಮವಹಿಸಬೇಕು. ಔಷದಿ ಕೊರತೆ, ಸಣ್ಣ ಪುಟ್ಟ ಶಸ್ತç ಚಿಕಿತ್ಸೆ ಕೂಡ ಇಲ್ಲಿನ ವೈದ್ಯರು ಮಾಡುವುದಿಲ್ಲ ಎಂಬ ದೂರುಗಳು ಬರುತ್ತಿವೆ ಇದರ ಬಗ್ಗೆ ಗಮನ ಹರಿಸಬೇಕು ಹಾಗೂ ವೆಂಟಿಲೇಟರ್ ಮತ್ತು ಅಂಬುಲೇನ್ಸ್ ಸರಿಯಾಗಿ ಕಾರ್ಯನಿರ್ವಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮವಾದ ಟೇಲಿ ಮಾನಸ ವಾಲ್ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು. ಶ್ರವಣ ದೋಷವಿರುವ ಮಕ್ಕಳಿಗೆ ಶ್ರವಣ ಯಂತ್ರಗಳನ್ನು ವಿತರಿಸಿದರು.ಸಬೆಗು ಮುನ್ನ ಸಚಿವರು ಬ್ರೀಮ್ಸ್ ಮತ್ತು 100 ಹಾಸಿಗೆಗಳ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಹುಮನ್ನಾಬಾದ ಶಾಸಕ ಡಾ. ಸಿದ್ದಲಿಂಗಪ್ಪ ಎನ್ ಪಾಟೀಲ್, ವಿಧಾನ ಪರಿಷತ ಸದಸ್ಯ ಅರವಿಂದಕುಮಾರ ಅರಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ನವೀನ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜ್ಞಾನೇಶ್ವರ ನಿರಗುಡಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.