ಕಾಂಗ್ರೆಸ್ ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಬೀದರ್: ಇಲ್ಲಿಯ ಶಿವನಗರದಲ್ಲಿ ಇರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿ, ಪ್ರಧಾನ ಕಾರ್ಯದರ್ಶಿ ಶಂಕರ ದೊಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಗೋವರ್ಧನ್ ರಾಠೋಡ್, ಪರ್ವೇಜ್ ಕಮಲ್, ಸೋಮನಾಥ ಕಂದಗೂಳ, ಶರಣಪ್ಪ ಶರ್ಮಾ, ಉದಯಕುಮಾರ ಮೂಲಗೆ ಮತ್ತಿತರರು ಪಾಲ್ಗೊಂಡಿದ್ದರು.