ಕಾರಂಜಾ ಸಂತ್ರಸ್ತರ ಬೇಡಿಕೆಗೆ ಪಕ್ಷಾತೀತ ರಾಜಕೀಯ ಇಚ್ಛಾಶಕ್ತಿಗೆ ಸರ್ಕಾರ ಸ್ಪಂದನೆ ಸ್ವಾಗತಾರ್ಹ : ಲಕ್ಷ್ಮಣ ದಸ್ತಿ
ಕಾರಂಜಾ ರೈತ ಸಂತ್ರಸ್ತರು ತಮ್ಮ ನ್ಯಾಯಯುತವಾದ ಬೇಡಿಕೆಗೆ ಆಗ್ರಹಿಸಿ ಕಳೆದ ಒಂದು ವರ್ಷಕ್ಕೂ ಮೇಲ್ಪಟ್ಟ ದಿನಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟಕ್ಕೆ ಸ್ಪಂದಿಸಿ ನೂತನ ಬೀದರ ದಕ್ಷಿಣ ಮತಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಳ್ದಾಳೆರವರು ಸದನದಲ್ಲಿ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡುವ ಬಗ್ಗೆ ಧ್ವನಿ ಎತ್ತಿರುವದ್ದಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆರವರು ಧ್ವನಿಗೂಡಿಸಿ ಪಕ್ಷಾತೀತವಾಗಿ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಿರುವುದು ಸಂತಸದ ವಿಷಯ, ಅಷ್ಟೇ ಅಲ್ಲದೆ ಸರ್ಕಾರದ ವತಿಯಿಂದ ಉಪ ಮುಖ್ಯಮಂತ್ರಿಗಳು ಮತ್ತು ನೀರಾವರಿ ಸಚಿವರಾದ ಡಿ. ಕೆ. ಶಿವಕುಮಾರರವರು ಇದಕ್ಕೆ ಸಕಾರಾತ್ಮಕವಾಗಿ ಸ್ದಂದಿಸಿರುವದು ಸ್ವಾಗತಾರ್ಹ ವಿಷಯವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶದ ಹಿರಿಯ ಹೋರಾಟಗಾರರಾದ ಲಕ್ಷ್ಮಣ ದಸ್ತಿ ಮತ್ತು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ ಹುಚಕನಳ್ಳಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸದನದಲ್ಲಿ ಸರ್ಕಾರದ ವತಿಯಿಂದ ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಉತ್ತರಿಸಿದ ಉಪ ಮುಖ್ಯಮಂತ್ರಿಗಳ ಭರವಸೆ ಬೀದರ ಜಿಲ್ಲೆಯ ಕಾರಂಜಾ ರೈತ ಸಂತ್ರಸ್ತರಿಗೆ ಸಂತಸ ತಂದಿದೆ ಮತ್ತು ತಮ್ಮ ಬಹು ದಿನಗಳ ಕನಸು ನನಸಾಗುವ ನಿರೀಕ್ಷೆ ಹೆಚ್ಚಾಗಿದೆ ಎಂದು ಸುಮಾರು ಒಂದು ವರ್ಷ ಹದಿನೆಂಟು ದಿನಗಳಿಂದ ಅಹೋರಾತ್ರಿ ರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತ ಸಂತ್ರಸ್ತರು ತಮ್ಮ ಸಂತಸದ ಆಶಯ ವ್ಯಕ್ತಪಡಿಸಿದ್ದಾರೆ.
ಉಪ ಮುಖ್ಯಮಂತ್ರಿಗಳು ನೀಡಿರುವ ಭರವಸೆಯಂತೆ ಜಿಲ್ಲೆಯ ಉಸ್ತುವಾರಿ ಸಚಿವರು ಶಾಸಕರು ರೈತ ಸಂತ್ರಸ್ತರನ್ನು ಸೇರಿಸಿ ಬೆಂಗಳೂರಿನಲ್ಲಿ ಸಂತ್ರಸ್ತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಆದಷ್ಟು ಶೀಘ್ರ ಸರ್ಕಾರ ಮಟ್ಟದಲ್ಲಿ ಸಭೆ ನಡೆಸಲು ಕಾರಂಜಾ ರೈತ ಸಂತ್ರಸ್ತರ ಹಿತ ರಕ್ಷಣಾ ಸಮಿತಿ ಮತ್ತು ಬೀದರ ಸಮಗ್ರ ಅಭಿವೃದ್ಧಿ ಜಂಟಿ ಕ್ರೀಯಾ ಸಮಿತಿ ಜಿಲ್ಲೆಯ ಸಚಿವರಿಗೆ ಮತ್ತು ಶಾಸಕರಿಗೆ ಮನವರಿಕೆ ಮಾಡಿದೆ.