ಕುಷ್ಠರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ-ಸಿಇಓ ಡಾ.ಗಿರೀಶ್ ಬದೋಲೆ
ಬೀದರ, ಜುಲೈ.23 :- ಜಿಲ್ಲೆಯಲ್ಲಿ ಕುಷ್ಟ ರೋಗ ಪತ್ತೆ ಹಚ್ಚುವ ಆಂದೋಲನವು 2024ರ ಜುಲೈ.29 ರಿಂದ ಆಗಸ್ಟ್ 14 ರವರೆಗೆ ಹಮ್ಮಿಕೊಂಡಿದ್ದು, ಇದರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹೇಳಿದರು.
ಅವರು ಮಂಗಳವಾರ ಬೀದರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಕುಷ್ಠರೋಗ ನಿರ್ಮೂಲನೆ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅನುಷ್ಠಾನ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ ಪಾಪದಿಂದ ಬರುವುದಿಲ.್ಲ ಈ ಕಾಯಿಲೆ ಮೈಕೋ ಬ್ಯಾಕ್ಟಿçÃಯಾ ಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ, ಈ ಬ್ಯಾಕ್ಟಿçÃಯಾಗಳು ಬಹು ಔಷಧಿ ಚಿಕಿತ್ಸೆ ಪಡೆಯದೇ ಇದ್ದ ಸೋಂಕಿತ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬರುವ ತುಂತುರ ಹನಿಗಳ ಮೂಲಕ ರೋಗಾಣುಗಳು ಗಾಳಿಯಲ್ಲಿ ಸೇರಿಕೊಂಡು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದಕ್ಕೆ ಯಾರು ಹೆದರುವ ಅವಶ್ಯಕತೆ ಇರುವುದಿಲ್ಲ. ಅದನ್ನು ಗುಪ್ತವಾಗಿಡದೆ ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾದಿಕಾರಿಗಳ ಗಮನಕ್ಕೆ ತಂದು, ಪ್ರಾರಂಭಿಕ ಹಂತದಲ್ಲೆ ಪತ್ತೆ ಹಚ್ಚಿ ಬಹು ಔಷದದಿಂದ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಎಂದು ಹೇಳಿದರು.
ಇದೊಂದು ನರ ಮತ್ತು ಚರ್ಮದ ಕಾಯಿಲೆಯಾಗಿದ್ದು, ಕುಷ್ಠರೋಗದಿಂದ ಉಂಟಾಗುವ ಅಂಗವಿಕಲತೆಗಳ ಬಗ್ಗೆ ನೆರೆ-ಹೊರೆ ಜನರಿಗೆ ಸೂಕ್ತ ತಿಳುವಳಿಕೆ ನೀಡಿ, ಅವಶ್ಯಕ ಚಿಕಿತ್ಸೆ ನೀಡುವಾಗ ಬೇಧ-ಬಾವ ಮಾಡದೇ ಗೌರವಯುತವಾಗಿ ಉಪಚರಿಸಿ, ರೋಗಿ ಗುಣಮುಖ ಹೊಂದಲು ಸಹಕರಿಸಿ, ಸಮಾಜದಲ್ಲಿ ರೋಗದ ಬಗ್ಗೆ ಸೂಕ್ತ ತಿಳುವಳಿಕೆ ನೀಡಿ ಪ್ರಾರಂಭದ ಹಂತದಲ್ಲೆ ರೋಗ ಪತ್ತೆ ಮಾಡಿ ಬಹು ಔಷದಿ ಚಿಕಿತ್ಸೆ üಪಡೆಯುವುದರಿಂದ ಸಂಪೂರ್ಣವಾಗಿ ಗುಣಮುಖರಾಗುವುದಲ್ಲದೆ, ಮುಂದಾಗಬಹುದಾದ ವಿಕಲಾಂಗತೆಯನ್ನು ಕೂಡ ತಡೆಗಟ್ಟಬಹುದು, ಇದಕ್ಕೆಲ್ಲಾ ಮಿಗಿಲಾಗಿ ಸಮಾಜದಲ್ಲಿರುವ ನಾವೆಲ್ಲರು ಒಗ್ಗಟ್ಟಾಗಿ ಈ ದಿಸೆಯಲ್ಲಿ ಕೆಲಸ ಮಾಡಿದರೆ ಗಾಂಧೀಜಿಯವರ ಕನಸು ಕುಷ್ಠರೋಗ ಮುಕ್ತ ಭಾರತವನ್ನು ನಾವೆಲ್ಲರೂ ನಿರ್ಮಿಸಬಹುದಾಗಿದೆ ಎಂದರು.
2024ನೇ ಜುಲೈ 29 ರಿಂದ ಆಗಸ್ಟ 14 ರವರೆಗೆ ಬೀದರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆಗಳಿಲ್ಲಿ ಸಂಬAಧಪಟ್ಟ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕುಷ್ಠರೋಗ ನಿವಾರಿಸಲು ಕ್ರಮವಹಿಸಬೇಕು ಹಾಗೂ ಗ್ರಾಮಗಳಲ್ಲಿ ಟಂಟA ಮೂಲಕ ಪ್ರಚಾರ ಮಾಡಿ ಜನರಲ್ಲಿ ಜಾಗ್ರತಿ ಮೂಡಿಸಿ. ಇದರ ಸಮ್ಮಿಕ್ಷೆ ಮಾಡುವ ಸಿಬ್ಬಂದಿಗಳಿಗೆ ಸಹಕಾರ ನೀಡುವದರೊಂದಿಗೆ ಕುಷ್ಠರೋಗಕ್ಕೆ ಸಂಬAದಿಸಿದAತೆ ಸಮಾಜದಲ್ಲಿನ ಕಳಂಕವನ್ನು ಹಾಗೂ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಿಳಿಸಬೇಕು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಐಇಸಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಈ ಕುರಿತು ಹೆಚ್ಚಿನ ಅರಿವು ಮೂಡಿಸಬೆಕೇಂದು ಹೇಳಿದರು.
ಇದೇ ಸಂದರ್ಭದಲ್ಲಿ ಕುಷ್ಠರೋಗ ಪತ್ತೆ ಹೆಚ್ಚುವ ಆಂದೋಲ-2024ರ ನಾನು ಸ್ವಪ್ನ ಕುಷ್ಠ ಮುಕ್ತ ಭಾರತ “ನನ್ನ ಸ್ವಪ್ನ” ಭಿತ್ತಿಪತ್ರಗಳನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿದರು.
ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಧ್ಯಾನೇಶ್ವರ ನೀರಗುಡೆ, ಜಿಲ್ಲಾ ಕುಷ್ಠರೋಗ ನೀರ್ಮೂಲನೆ ಅಧಿಕಾರಿ ಡಾ.ಕಿರಣ.ಎಮ್.ಪಾಟೀಲ್, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ.ಅನಿಲ ಚಿಂತಾಮಣಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೋಂಗರೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರ ಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.