ಕು.ಬಸವಕುಮಾರ ಸ್ವಾಮಿ ಅವರಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕ ಹಾಗೂ ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಹಾವೇರಿ ನಗರದ ಶ್ರೀ ಗುರುಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಜರುಗಿದ ಪತ್ರಕರ್ತರ ಮಕ್ಕಳಿಗಾಗಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬೀದರ್ ನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಅವರ ಸುಪುತ್ರ ಕು.ಬಸವಕುಮಾರ ಸ್ವಾಮಿ ಅವರಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.