ಬೀದರ್

ಕೇಂದ್ರ ಬಜೆಟ್ ಸರ್ವವ್ಯಾಪಿ, ಸರ್ವಸ್ಪರ್ಶಿ : ಪ್ರಭು ಚವ್ಹಾಣ

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಕೇಂದ್ರ ಬಜೆಟನ್ನು ಸ್ವಾಗತಿಸಿದ್ದಾರೆ.
ಆಯವ್ಯಯದಲ್ಲಿ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಯುವಕರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲಾಗಿದೆ. ಉದ್ಯೋಗ, ಕೌಶಲ್ಯ ವೃದ್ದಿ ಮತ್ತು ಮಾಧ್ಯಮ ವರ್ಗದವರ ಏಳಿಗೆಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎಲ್ಲ ಕ್ಷೇತ್ರಗಳು ಮತ್ತು ಎಲ್ಲ ವರ್ಗದವರಿಗೂ ತಲುಪುವಂತಹ ಯೋಜನೆಗಳನ್ನು ನೀಡಲಾಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ‘ವಿಕಸಿತ ಭಾರತ’ ನಿರ್ಮಾಣ ಸಂಕಲ್ಪಕ್ಕೆ ಈ ಬಜೆಟ್ ಪೂರಕವಾಗಿದೆ. ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳಿಗೆ ಹಣಕಾಸು ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಿಂದೆ ಜಾರಿಗೊಳಿಸಿದ್ದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ನೀಡಲಾಗುತ್ತಿದ್ದ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ ಮಾಡಿರುವುದು ಶ್ಲಾಘನೀಯ ಎಂದಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ 500 ಉನ್ನತ ಕಂಪನಿಗಳಲ್ಲಿ ಒಂದು ಕೋಟಿ ಯುವ ಜನತೆಗೆ ಇಂಟರ್ನಶಿಪ್ ಒದಗಿಸುವ ಯೋಜನೆಯನ್ನು ಘೋಷಿಸಿರುವುದಲ್ಲದೇ ಉದ್ಯೋಗ ಸೃಷ್ಟಿಯತ್ತ ಹೆಚ್ಚಿನ ಆಸಕ್ತಿ ತೋರಿಸಿರುವುದು ಯುವಜನತೆಯ ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇಶದ ಆಯ್ದ ನಗರಗಳಲ್ಲಿ 100 ಸ್ಟಿçÃಟ್ ಫುಡ್ ಹಬ್ ಸ್ಥಾಪನೆ, 100 ದೊಡ್ಡ ನಗರಗಳಲ್ಲಿ ನೀರು ಸರಬರಾಜು, ಒಳಚರಂಡಿ ನಿರ್ವಹಣೆ ಹಾಗೂ ತ್ಯಾಜ್ಯ ನಿರ್ವಹಣೆ ಯೋಜನೆ, ಪಿಎಂ ಆವಾಸ್ ಯೋಜನೆಯಡಿ ನಗರ ಪ್ರದೇಶದ ಬಡವರಿಗಾಗಿ 1 ಕೋಟಿ ಮನೆಗಳ ನಿರ್ಮಾಣ, ಪಿಎಂ ಸೂರ್ಯ ಘರ್ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಯೋಜನೆ ಹೀಗೆ ಹತ್ತು ಹಲವು ಯೋಜನೆಗಳನ್ನು ಘೋಷಿಸಿಸುವುದರೊಂದಿಗೆ ದೇಶದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೂ ಮತ್ತು ಸತತ 7ನೇ ಬಾರಿಗೆ ಉತ್ತಮ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಶಾಸಕ ಪ್ರಭು ಚವ್ಹಾಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!