ಖಾಸಗಿ ಶಾಲಾ ಸಂಘಕ್ಕೆ ಆಯ್ಕೆ: ಸತ್ಕಾರ
ಬೀದರ್: ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಇಲ್ಲಿಯ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸತ್ಕರಿಸಲಾಯಿತು.
ಶಾಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ಮಣಗೇರೆ, ಬೀದರ್ ಉತ್ತರ ಘಟಕದ ಅಧ್ಯಕ್ಷ ಸಂದೀಪ್ ಶೆಟಕಾರ್, ಪ್ರಧಾನ ಕಾರ್ಯದರ್ಶಿ ಗಣಪತಿ ಸೋಲಪುರೆ, ಬೀದರ್ ದಕ್ಷಿಣ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಬಶೆಟ್ಟಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.
ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ, ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಬಸವರಾಜ ಮುಗುಟಾಪುರೆ, ಸಾರಿಕಾ, ಜ್ಯೋತಿ, ಪಲ್ಲವಿ, ಚಂದ್ರಕಲಾ, ಪೂಜಾ, ಶೈಲಜಾ, ಮಾರುತೆಪ್ಪ, ಸುಮೀತ್ ಮತ್ತಿತರರು ಇದ್ದರು. ಅಲ್ಕಾವತಿ ನಿರೂಪಿಸಿದರು.ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.