ಗೃಹಜ್ಯೋತಿ ಯೋಜನೆ ಬಡಜನರ ಆರ್ಥಿಕ ಹೊರೆತಗ್ಗಿಸಲಿದೆ: ಸಚಿವ ಈಶ್ವರ ಬಿ. ಖಂಡ್ರೆ
ಅವರು ಶುಕ್ರವಾರ ಬೀದರ ನಗರದ ಪ್ರತಾಪ ನಗರದ ಹತ್ತಿರದ ಘಾಳೆ ಲಕ್ಸುರಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಆಗಸ್ಟ್ 5 ರಂದು ಕಲಬುರಗಿಯಲಿ ಮುಖ್ಯಮಂತ್ರಿಗಳು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುತ್ತಾರೆ. ಅದರಂತೆ ಇಂದು ಬೀದರದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದೇನೆ. ಜಿಲ್ಲೆಯಲ್ಲಿ 3,67,871 ಜನ ವಿದ್ಯುತ್ ಬಳಕೆದಾರರಿದ್ದು, ಇದರಲ್ಲಿ 2,99,628 ಜನ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಸಿಕೊಂಡಿರುವುದರಿAದ ಶೇ.81% ಪ್ರತಿಶತ ಜನರು ಈ ಯೋಜನೆ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದೆ. ಅದರಂತೆ ಈಗಾಗಲೇ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ದಿನನಿತ್ಯ 50 ಲಕ್ಷ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹಾಗೂ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ.ಅಕ್ಕಿ ನೀಡಲು ನಿರ್ಧರಿಸಲಾಗಿತ್ತು ಆದರೆ ಅಕ್ಕಿ ಹೊಂದಿಸಲು ಆಗದೇ ಇರುವುದರಿಂದ ತಲಾ 170 ರೂ. ರಂತೆ ಪಡಿತರ ಕುಟುಂಬರ ಮುಖ್ಯಸ್ಥರ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ ಎಂದು ಹೇಳಿದರು.
ಇನ್ನೂಳಿದ ಯೋಜನೆಗಳಾದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷಿö್ಮÃ ಯೋಜನೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, 1 ಕೋಟಿ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ ಮುಂದಿನ ದಿನಗಳಲ್ಲಿ ಇದರ ಸಂಖ್ಯೆ 1.50 ಕೋಟಿಗೆ ದಾಟುವ ಸಂಭವ ಇದೆ. ಈ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುವುದು. ಅದೇ ರೀತಿ ನಿರುದ್ಯೋಗಿ ಯುವಕ ಯುವತಿಯರಿಗೆ ನೀರುದ್ಯೋಗ ಪದವಿಧರರಿಗೆ 3000 ರೂ. ಹಾಗೂ ಡಿಪ್ಲೋಮಾ ಪದವಿಧರರಿಗೆ 1500 ರೂ. ನೀಡುವ ಯುವನಿಧಿ ಯೋಜನೆಗೆ ಜನವರಿಯಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಅರಣ್ಯ ಇಲಾಖೆಯಿಂದ ರಾಜ್ಯದ್ಯಾಂತ 5 ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಲಾಗಿತ್ತು, ಈಗಾಗಲೇ 41 ದಿನಗಳಲ್ಲಿ ರಾಜ್ಯದಲ್ಲಿ 3 ಕೋಟಿ 10 ಲಕ್ಷ ಸಸಿಗಳನ್ನು ನೆಡಲಾಗಿದೆ ಹಾಗೂ ಬೀದರ ಜಿಲ್ಲೆಯಲ್ಲಿ 10.5 ಲಕ್ಷ ಸಸಿಗಳನ್ನು ನೆಡಲಾಗಿದೆ, ಈಗಾಗಲೇ ಬೀದರ ಜಿಲ್ಲೆಯಲ್ಲಿ ಕೃಷ್ಣಾಮೃಗ ಮೀಸಲು ಪ್ರದೇಶ ನಿರ್ಮಿಸಲು ನಿರ್ಧರಿಸಿದ್ದು ಅರಣ್ಯ ಇಲಾಖೆಯಿಂದ 2 ಕೋಟಿ ಅನುದಾನ ನೀಡಲಾಗಿದೆ ಮತ್ತು ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೇಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಅನುಧಾನ ನೀಡಿದ್ದು ಕಳೆದ ಬಾರಿ 2 ಸಾವಿರ ಕೋಟಿ ಅನುಧಾನ ಸೇರಿ ಒಟ್ಟು 5 ಸಾವಿರ ಕೋಟಿ ಅನುಧಾನ ಕೆ.ಕೆ.ಆರ್.ಡಿ.ಬಿಯಡಿ ಇದ್ದು ಮುಂದಿನ ದಿನಗಳ ಈ ಭಾಗದ ಅಭಿವೃದ್ಧಿಗೆ ಅದನ್ನು ಹಂತ ಹಂತವಾಗಿ ಬಳಕೆ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ತ್ಯಾಜವನ್ನು ಹೊರಸೂಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕೈಗಾರಿಕೆಗಳ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ವಹಿಸುವಂತೆ ಅಧಿಕಾರಿಗಳಿ ಸೂಚಿಸಿದ್ದೇನೆ ಇಗಾಗಲೇ 8 ಕೈಗಾರಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸರದ ನಿಯಮಗಳನ್ನು ಮೀರಿ ಕೈಗಾರಿಕೆಗಳನ್ನು ನಡೆಸುತ್ತಿದ್ದರೆ ಅವರ ವಿರುದ್ಧವು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ತಿಂಗಳ ವಿದ್ಯುತ ಬಿಲ್ ಕಟ್ಟಲಾಗದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕೆಲವು ಜನರಿದ್ದಾರೆ ಅವರಿಗೆ ಗೃಹಜ್ಯೋತಿ ಯೋಜನೆಯಿಂದ ಲಾಭವಾಗಲಿದೆ ಅದೇ ರೀತಿ ಗೃಹಲಕ್ಷಿö್ಮÃ ಯೋಜನೆಯಿಂದ ಮನೆಯ ಯಜಮಾನಿಯರು 2 ಸಾವಿರ ಪಡೆಯಲಿದ್ದಾರೆ ಇದು ಅವರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಐದು ಮಹತ್ವಕಾಂಕ್ಷಿ ಯೋಜನೆಗಳ ಲಾಭವನ್ನು ರಾಜ್ಯದ ಶೇ.80 ರಿಂದ 90 ಪ್ರತಿಶತ ಜನ ಲಾಭ ಪಡೆಯಲಿದ್ದಾರೆ ಇದು ದೇಶಕ್ಕೆ ಮಾದರಿಯಾಗಲಿದೆ. ಮಹಿಳೆಯರಿಗೆ, ಯುವಕರಿಗೆ, ಸೇರಿದಂತೆ ರಾಜ್ಯದ ಎಲ್ಲಾ ಜನರು ಈ ಐದು ಯೋಜನೆಗಳಲ್ಲಿ ಒಂದಲ್ಲಾ ಒಂದು ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಗೃಹಜ್ಯೋತಿ ಯೋಜನೆಯಡಿ ಲಾಭ ಪಡೆದ ಫಲಾನುಭವಿಗಳಿಗೆ ಜೀರೊ ವಿದ್ಯುತ್ ಬಿಲ್ ವಿತರಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸದಸ್ಯರುಗಳಾದ ಅರವಿಂದಕುಮಾರ ಅರಳಿ, ಭೀಮವಾರ ಬಿ. ಪಾಟೀಲ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಜೆಸ್ಕಾಂ ಕಲರ್ಬುರ್ಗಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಪಾಂಡ್ವೆ ರಾಹುಲ್ ತುಕಾರಾಮ್, ಜೆಸ್ಕಾಂ ಕಲಬುರ್ಗಿ ವಿಭಾಗದ ತಾಂತ್ರಿಕ ನಿರ್ದೇಶಕ ಮತ್ತು ಮುಖ್ಯ ಅಭಿಯಂತರ ಆರ್.ಡಿ. ಚಂದ್ರಶೇಖರ, ಬೀದರ ಜೇಸ್ಕಾಂ ಕಾರ್ಯ ಪಾಲಕ ಅಭಿಯಂತರರ ರಮೇಶ ಪಾಟೀಲ್, ಜೇಸ್ಕಾಂನ ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.