ಬೀದರ್

ಗ್ರಾಮದಲ್ಲಿ ಸ್ವಚ್ಚತೆ ಕಾಪಾಡಿ, ಗ್ರಾಮಸ್ಥರೆಲ್ಲರೂ ನೀರು ಕುದಿಸಿ ಆರಿಸಿ ಸೇವಿಸಿ : ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ

ಬೀದರ್ ದಕ್ಷಿಣ ಕ್ಷೇತ್ರದ ಬರಿದಾಬಾದ ಗ್ರಾಮದಲ್ಲಿ ಕಲುಷಿತ ನೀರು ಸೇವಸಿ ಹಲವು ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಬರಿದಾಬಾದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದರು.
ಬರಿದಾಬಾದ ಗ್ರಾಮದಲ್ಲಿ ಕಲುಷಿತ ನೀರು ಸೇವಸಿ ಅಸ್ವಸ್ಥಗೊಂಡ ಜನರ ಪರಿವಾರದ ಜನರಿಗೆ ಭೇಟಿ ಮಾಡಿ ಧೈರ್ಯ ತುಂಬಿ ಎಲ್ಲರೂ ಕುದಿಸಿದ ನೀರು ಸೇವಿಸಲು ಮನವಿ ಮಾಡಿದರು.ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಸುತ್ತಾಡಿ  ಅಲ್ಲಿನ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮದಲ್ಲಿರುವ ವೈದ್ಯರಿಗೆ ಮಾತನಾಡಿ ಗ್ರಾಮದ ಎಲ್ಲ ಜನರಲ್ಲಿ ಆರೋಗ್ಯದ ಕುರಿತು ನಿಗಾ ವಹಿಸಬೇಕು ಎಂದು ಸೂಚಿಸಿದರು. ಗ್ರಾಮದ ಸುತ್ತಮುತ್ತ ಇರುವ ರಸ್ತೆ ಸಮಸ್ಯೆ ಚರಂಡಿ ವ್ಯವಸ್ಥೆ ಕುರಿತು ಅಹವಾಲು ಸ್ವೀಕರಿಸಿ ಶೀಘ್ರವೆ ನರೆಗಾದಡಿ ಚರಂಡಿ ವ್ಯವಸ್ಥೆ ಮಾಡಬೇಕು ಮತ್ತು ನಮ್ಮ ಅನುದಾನದಲ್ಲಿ ರಸ್ತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಬಳಿಕ ಮಾತನಾಡಿದ ಅವರು ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಹಲವು ಮನೆಗಳು ಭಾಗಶಃ ಹಾನಿಯಾಗಿವೆ  ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದರು. ಹಲವು ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಾಗಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣ ವಾಗುತ್ತಿದೆ ಈ ಕೂಡಲೇ ಅಧಿಕಾರಿಗಳು ಪರಿಶೀಲನೆ ನಡೆಸಿ ಗುತ್ತಿಗೆದಾರನಿಗೆ ನೋಟಿಸ್ ಜಾರಿ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.  ವೈದ್ಯರು, ಗ್ರಾಪಂ ಅಧಿಕಾರಿಗಳು ಗ್ರಾಮಸುತ್ತೆಲ್ಲಾ ಸುತ್ತಾಡಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಜನಸಾಮಾನ್ಯರ ಆರೋಗ್ಯ ಕಾಪಾಡಬೇಕು ಪ್ರತಿಯೊಬ್ಬರು ಕುಡಿಯುವ ನೀರು ಕಾಸಿ ಆರಿಸಿ ಸೇವಿಸಬೇಕು ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡುಬAದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಟಿಎಚ್ ಓ ಸಂಗಾರೆಡ್ಡಿ, ವೈದ್ಯರಾದ ರೇಳುಕಾ ಜಾಧವ, ಕಂದಾಯ ಇಲಾಖೆ ಅಧಿಕಾರಿ ಶ್ರೀಶೈಲ್, ಚಂದ್ರಕಾAತ. ಗ್ರಾಪಂ ಅಧ್ಯಕ್ಷ ನಾಗೇಶ ಮೈಲಾರೆ, ಮುಖಂಡರಾದ ಘಾಳೆಪ್ಪ ಚಟ್ಟನಳ್ಳಿ,  ಮಾಣಿಕರಾವ ಬರಿದಾಬಾದ, ಗೋಪಾಲ ಬರಿದಾಬಾದ, ವೀರೇಂದ್ರ ಪಾಟೀಲ್, ಚಂದು ಭಂಡೆ ಮತ್ತಿತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!