ಬೀದರ್

ಚಿಂತಾಕಿ ವಸತಿ ನಿಲಯ ಕೆಲಸಕ್ಕೆ ಶಾಸಕ ಪ್ರಭು ಚವ್ಹಾಣ ಚಾಲನೆ

ಔರಾದ(ಬಿ) ತಾಲ್ಲೂಕಿನ ಚಿಂತಾಕಿಯಲ್ಲಿ ನಿರ್ಮಿಸಲಾಗುತ್ತಿರುವ 15 ಕೋಟಿ ವೆಚ್ಚದ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಮಂಗಳವಾರ ಚಾಲನೆ ನೀಡಿದರು.
ಕ್ಷೇತ್ರವು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ಉದ್ದೇಶದಿಂದ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಹೆಣ್ಣು ಮಕ್ಕಳು ಕೂಡ ಉನ್ನತ ಶಿಕ್ಷಣ ಪಡೆಯಬೇಕು. ಉತ್ತಮ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬೇಕು. ಸ್ವಾವಲಂಬಿ ಜೀವನ ಸಾಗಿಸಬೇಕು. ಈ ದಿಶೆಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಬಾಲಕಿಯರ ವಸತಿ ಶಾಲೆಗಳನ್ನು ತೆರೆಯಲಾಗಿದೆ.
ಚಿಂತಾಕಿ ಗ್ರಾಮದಲ್ಲಿಯೂ ಬಾಲಕಿಯರಿಗಾಗಿ ವಸತಿ ನಿಲಯ ನಿರ್ಮಿಸಬೇಕೆಂಬುದು ಹಲವು ದಿನಗಳ ಆಕಾಂಕ್ಷೆಯಾಗಿತ್ತು. ಜನರ ಬೇಡಿಕೆಯೂ ಇತ್ತು. ಅದರಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಯೋಜನೆಯಡಿ ಕಾಮಗಾರಿ ಕೈಗೆತ್ತಿಗೊಳ್ಳಲಾಗುತ್ತಿದೆ ಎಂದರು.
ಈ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಸದಾಶಯದೊಂದಿಗೆ ಕೆಲಸ‌‌ ಮಾಡುತ್ತಿದ್ದು, ಮುಂದಿನ‌ ದಿನಗಳಲ್ಲಿ ಶಿಕ್ಷಣದ ಅಭಿವೃದ್ಧಿಗೆ ಬೇಕಾದ ಎಲ್ಲ ಕೆಲಸಗಳನ್ನು ಮಾಡಲಾಗುವುದೆಂದು ಹೇಳಿದರು.
ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಮಾಡಬೇಕು. ಕೆಲಸದಲ್ಲಿ ಯಾವುದೇ ರೀತಿಯ ಲೋಪಗಳಾಗದಂತೆ ಜಾಗ್ರತೆ ವಹಿಸಬೇಕು. ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಬೇಕು. ಯಾವುದೇ ರೀತಿಯ ದೂರುಗಳು ಬಂದಲ್ಲಿ ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು. ನಂತರ ಮೆಡಪಳ್ಳಿಯಲ್ಲಿ 20 ಲಕ್ಷದ ಸ್ಟೀಲ್ ಬ್ರಿಜ್, ಟಿಪಿಎಸ್ ತಾಂಡಾದಲ್ಲಿ 40 ಲಕ್ಷದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಕೇರಬಾ ಪವಾರ, ಖಂಡೋಬಾ ಕಂಗಟೆ, ಗೋವಿಂದ ರೆಡ್ಡಿ, ಶರಣಪ್ಪಾ ಪಾಟೀಲ, ಅನೀಲ ಬಿರಾದಾರ, ರಾವಸಾಹೇಬ ಪಾಟೀಲ, ಶಿವಕುಮಾರ ಮಜಗೆ , ಈರಾರೆಡ್ಡಿ ಸೇರಿದಂತೆ ಇತರರಿದ್ದರು.
Ghantepatrike kannada daily news Paper

Leave a Reply

error: Content is protected !!