ಬೀದರ್

ಚಿಟ್ಟಗುಪ್ಪ ತಾಲ್ಲೂಕಿನ ವ್ಯಾಪ್ತಿಯಲ್ಲಿನ ಅಧಿಕಾರಿಗಳ ಸಭೆ ನಡೆಸಿದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ

 ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು,ಪ್ರಗತಿಯಲ್ಲಿರುವ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಿ ಜನ ಸಾಮಾನ್ಯರಿಗೆ ಸ್ಪಂದಿಸುವ ಮೂಲಕ ಕ್ಷೇತ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ ಶೈಲೇಂದ್ರ ಬೆಲ್ದಾಳೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಚಿಟ್ಟಗುಪ್ಪ ತಾಲ್ಲೂಕಿನ ವ್ಯಾಪ್ತಿಯಲ್ಲಿ  ಬರುವ ಬೀದರ್ ದಕ್ಷಿಣ ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿ ಪರಿಶೀಲನೆ ಕುರಿತು ಶಾಸಕರ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಗೆ ಮತ್ತು ಆಡಳಿತಕ್ಕೆ ಚುರುಕು ನೀಡುವ ನಿಮಿತ್ತ ಗ್ರಾಮಪಂಚಾಯಿತಿ ಮಟ್ಟದಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ  ವಿವಿಧ ಇಲಾಖೆಗಳ ಅಧಿಕಾರಿಗಳ  ಸಭೆ ನಡೆಸಿ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರಪೂರ್ಣಗೊಳಿಸುವಂತೆ ಸೂಚಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಮಳೆಗಾಲ ಇರುವ ಹಿನ್ನೆಲೆಯಲ್ಲಿ ಜನಸಾಮಾನ್ಯರ ಆರೋಗ್ಯ ಹಿತದೃಷ್ಟಿಯಿಂದ  ಎಲ್ಲಾ ಗ್ರಾಮಗಳಲ್ಲಿ ವೈದ್ಯರು ಜನರಲ್ಲಿ ಜಾಗೃತಿ ಮೂಡಿಸಿ ಉತ್ತಮ ಚಿಕಿತ್ಸೆ ನೀಡಬೇಕು ಎಂದರು.
ನೀರಾವರಿ ಯೋಜನೆಯ ಜೆಜೆಎಂ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಕಂಡು ಬಂದಲ್ಲಿ ಶೀಘ್ರ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಬೇಕು ಪ್ರತಿ ಯೊಂದು ಗ್ರಾಮದಲ್ಲಿ ಕುಡಿಯುವ ನೀರು ಉತ್ತಮವಾಗಿ ಸರಬರಾಜಿಗೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆ ಅಧಿಕಾರಿಗಳು ಮಳೆಯಿಂದಾಗಿ ಮನೆ ಬಿದ್ದ ಪರಿಣಾಮ   ಹಾನಿ ಉಂಟಾಗಿರುವ ಸಮೀಕ್ಷೆಯಲ್ಲಿ ವರದಿ    ಶೀಘ್ರ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಬೇಕು   ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಚಿಟ್ಟಗುಪ್ಪ ಇಒ ಲಕ್ಷ್ಮಿ, ತಹಶೀಲ್ದಾರ್ ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Ghantepatrike kannada daily news Paper

Leave a Reply

error: Content is protected !!