ಜುಲೈ 20 ರಿಂದ ಗೃಹಲಕ್ಷಿö್ಮÃ ಯೋಜನೆ ನೋಂದಣಿ ಕಾರ್ಯ ಪ್ರಾರಂಭ-ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ, ಜುಲೈ 19- ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷಿö್ಮÃ ಯೋಜನೆ”ಯಡಿ ಫಲಾನುಭವಿಯ ನೊಂದಣಿ ಜುಲೈ 20 ರಿಂದ ಬೀದರ ಜಿಲ್ಲೆಯಲ್ಲಿ ಆರಂಭಿಸಲಾಗುವುದು. ನಗರ ಮತ್ತು ಗ್ರಾಮೀಣ ಪ್ರದೇಶದ ಫಲಾನುಭವಿಗಳು ನೊಂದಾಯಿಸಿಕೊಳ್ಳಲು ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 248 ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರಗಳು ಹಾಗೂ ನಗರ ಪ್ರದೇಶಗಳಲ್ಲಿ 25 ಗೃಹ ಲಕ್ಷಿö್ಮÃ ಯೋಜನೆ ನೊಂದಣಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ನಗರ ಪ್ರದೇಶದಲ್ಲಿ ನಿಗದಿಪಡಿಸಿರುವ ಕೇಂದ್ರಗಳಿಗೆ ಪಟ್ಟಣ ಪಂಚಾಯತಿ, ಪುರಸಭೆ, ನಗರ ಸಭೆ ಸಿಬ್ಬಂದಿಗಳನ್ನು ಮೇಲ್ವಿಚಾರಣಾ ಅಧಿಕಾರಿ ಮತ್ತು ಸಂಬAಧಪಟ್ಟ ಪೌರಾಯುಕ್ತರು, ಮುಖ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರಗಳಿಗೆ ಸದರಿ ಕೇಂದ್ರಗಳ ಮೇಲ್ವಿಚಾರಕರನ್ನು ಹಾಗೂ ಸಂಬAಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ಪ್ರತಿ ತಾಲ್ಲೂಕ ತಾಂತ್ರಿಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಪ್ರಯುಕ್ತ ಸದರಿ ಯೋಜನೆಯ ಜಿಲ್ಲೆಯ ಅರ್ಹ ಫಲಾನುಭವಿಗಳು ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ನಗರ ಪ್ರದೇಶಗಳ “ಗೃಹಲಕ್ಷಿö್ಮÃ ಯೋಜನೆ ನೊಂದಣಿ” ಸೇವಾ ಕೇಂದ್ರಗಳಿಗೆ ತೆರಳಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.
ಗೃಹಲಕ್ಷಿö್ಮÃ ಯೋಜನೆ: ಗೃಹಲಕ್ಷಿö್ಮ ಯೋಜನೆಯಡಿ ಫಲಾನುಭವಿಯ ನೊಂದಣಿ ಜುಲೈ 20 ರಿಂದ ಆರಂಭಿಸಲಾಗುವುದು. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆಯ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ ಪಾವತಿದಾರರಾಗಿರತಕ್ಕದ್ದಲ್ಲ.
ಫಲಾನುಭವಿಯು ನೊಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ, ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೊಂದಾವಣೆ ಮಾಡಿಸುವ ಸ್ಥಳದ ವಿವರಗಳನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ–ಒನ್ ವಾರ್ಡ್ ಕಛೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳು ಕೇಂದ್ರವಾಗಿರುತ್ತದೆ. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ, ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು.
ಪ್ರತಿ ಫಲಾನುಭವಿಯ ನೊಂದಾವಣೆಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರ್ಗೆ ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ-ಒನ್, ಬಾಪೂಜಿ ಕೇಂದ್ರ, ಕರ್ನಾಟಕ-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದAದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ. ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮತ್ತು ಬ್ಯಾಂಕ್ ಖಾತೆಯ ಪಾಸ್ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ, ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದ್ದಲ್ಲಿ, ಸದರಿ ಬ್ಯಾಂಕ್ ಖಾತೆಯ ಪಾಸ್ಬುಕ್) ಮಾಹಿತಿ ಅಗತ್ಯವಿರುತ್ತದೆ. ನೊಂದಣಿಗೆ ನಿಗದಿಪಡಿಸಿದ ದಿನಾಂಕದAದು ಈ ಎಲ್ಲಾ ಮಾಹಿತಿಗಳೊಂದಿಗೆ ಫಲಾನುಭವಿಗಳು ಕೇಂದ್ರಕ್ಕೆ ಹಾಜರಾಗುವುದು. ಗ್ರಾಮ-ಒನ್, ಬಾಪೂಜಿ ಕೇಂದ್ರ, ಕರ್ನಾಟಕ-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊAಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊAಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು.
ಮೇಲಿನಂತೆ ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್, ಬಾಪೂಜಿ ಕೇಂದ್ರ, ಕರ್ನಾಟಕ-ಒನ್ ನೊಂದಾಯಿಸಿಕೊAಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು. ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್, ಬಾಪೂಜಿಕೇಂದ್ರ, ಕರ್ನಾಟಕ-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊAಡಿದ್ದಲ್ಲಿ, ಅನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪ್ರಯತ್ನಿಸಿದರೆ ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ. ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಹೆಯಾನ 2000 ರೂ.ಗಳನ್ನು ಡಿ.ಬಿ.ಟಿ, ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ 2000 ರೂ. ಗಳನ್ನು ಆರ್.ಟಿ.ಜಿ.ಎಸ್ ಮೂಲಕ ಜಮೆ ಮಾಡಲಾಗುವುದು.
ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಈ ಯೋಜನೆಯಡಿ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ. ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ, ಮುಂದೆ ಯಾವುದೇ ದಿನಾಂಕ, ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಬೀದರ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.