ಜೈ ಭಾರತ ಮಾತಾ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ರಥದಲ್ಲಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ
ಬೀದರ್: ಜೈ ಭಾರತ ಮಾತಾ ಸೇವಾ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದಲ್ಲಿ ಅಲಂಕೃತ ರಥದಲ್ಲಿ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.
ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ ನೇತೃತ್ವದಲ್ಲಿ ಗ್ರಾಮದ ಶಿವಶಕ್ತಿಲಿಂಗ ಆಶ್ರಮದಿಂದ ಆರಂಭಗೊಂಡ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಸಿಡಿ ಮದ್ದು ಪ್ರದರ್ಶನ, ಡೊಳ್ಳು ಕುಣಿತ, ಭಜನೆ ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಯುವಕರು, ಮಹಿಳೆಯರು ಹೆಜ್ಜೆ ಹಾಕಿ ಸಂಭ್ರಮ ಇಮ್ಮಡಿಗೊಳಿಸಿದರು.
ಮೆರವಣಿಗೆ ಉದ್ದಕ್ಕೂ ಕನ್ನಡ ತಾಯಿ ಭುವನೇಶ್ವರಿಗೆ ಜಯವಾಗಲಿ, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬಿತ್ಯಾದಿ ಘೋಷಣೆಗಳು ಮೊಳಗಿದವು.
ಸಮಿತಿಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಶೆರಗಾರ, ಪ್ರಮುಖರಾದ ಶಿವರಾಜ ಕೋಟೆ, ರಾಜಕುಮಾರ ಕೋಟೆ, ಪ್ರಕಾಶ ಶಂಭು, ಬಸವರಾಜ ಕುಂಬಾರಗೆರೆ, ಶಿವಾನಂದ ಕುಂಬಾರ, ವೈಜಿನಾಥ ಝಳಕೆ, ಶಹಾಜಿರಾವ್ ಪಾಟೀಲ, ಮಲ್ಲಿಕಾರ್ಜುನ ಕಾಡವಾದ, ವಿಶ್ವ, ಮಾಣಿಕ, ಮಲ್ಲಿಕಾರ್ಜುನ ಮತ್ತಿತರರು ಭಾಗವಹಿಸಿದ್ದರು.