ಬೀದರ್

ದ್ವಿತೀಯ ಪಿಯುಸಿ ಪರೀಕ್ಷೆ-3 ಸುವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಬೀದರ. ಜೂನ್. 21 :- ಬೀದರ ಜಿಲ್ಲೆಯಲ್ಲಿ ಜೂನ್.24 ರಿಂದ ಜುಲೈ.5 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಸುವ್ಯವಸ್ಥಿತವಾಗಿ ಯಾವುದೇ ಅಹೀತಕರ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪೂರ್ವಸಿದ್ದತಾ ಸಭೆಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ 184 ಕಾಲೇಜುಗಳಿಂದ 11 ಪರೀಕ್ಷೆ ಕೇಂದ್ರಗಳಲ್ಲಿ 3021 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಸೂಚಿಸಿದ ಅಧಿಕಾರಿಗಳು ಪರೀಕ್ಷಾ ಮಂಡಳಿಯಿAದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ಸರಿಯಾಗಿ ತಲುಪುವಂತೆ ನೋಡಿಕೆಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮರಗಳನ್ನು ಪರಿಶೀಲಿಸಿ ಇಟ್ಟುಕೊಳ್ಳಬೇಕು, ಪರೀಕ್ಷಾ ಸಮಯದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾAತ ಶಾಬಾದಕರ, ತಾಲ್ಲೂಕಿನ ಎಲ್ಲಾ ತಹಸೀಲ್ದಾರಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು ಪರೀಕ್ಷಾ ವೀಕ್ಷಕರು ಸೇರಿದಂತೆ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!