ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ
ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನಾ ಇಹಲೋಕ ತ್ಯಜಿಸಿದ್ದಾರೆ.ವಿಜಯ್ ಪತ್ನಿ ಸ್ಪಂದನಾ ಅವರು ಇತ್ತೀಚಿಗೆ ಬ್ಯಾಂಕಾಕ್ (Bankok) ಪ್ರವಾಸಕ್ಕೆ ತೆರಳಿದ್ದಾಗ ಹೃದಯಾಘಾತವಾಗಿದೆ. ಅಪ್ಪು ನಿಧನದ ಶಾಕ್ನಿಂದ ಹೊರ ಬಂದಾಗಲೇ ಮತ್ತೊಂದು ಆಘಾತಕಾರಿ ವಿಚಾರ ಕುಟುಂಬಕ್ಕೆ ಶಾಕ್ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.