ನಮ್ಮ ಸರ್ಕಾರ ಜನಪರ ಸರ್ಕಾರ-ಸಚಿವ ಈಶ್ವರ ಬಿ.ಖಂಡ್ರೆ
ಬೀದರ, ಆಗಸ್ಟ್ 15 – ನಮ್ಮ ಸರ್ಕಾರ ಜನಪರ ಸರ್ಕಾರವಾಗಿದ್ದು, ಜನರ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಮಂತ್ರವಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ಮಂಗಳವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಚುನಾವಣೆ ಪೂರ್ವ ಘೋಷಿಸಿದ ಭರವಸೆಗಳ ಗ್ಯಾರಂಟಿಗಳನ್ನು ಈಡೇರಿಸುತ್ತಿದ್ದೇವೆ, ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ಇದೇ ಆಗಸ್ಟ್ 27 ರಂದು ಗೃಹಲಕ್ಷಿö್ಮÃ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ. ಗೃಹಲಕ್ಷಿö್ಮÃ ಯೋಜನೆಯಡಿ ಮನೆ ಒಡತಿಗೆ ಪ್ರತಿ ತಿಂಗಳು 2000 ರೂ. ನೀಡಲಾಗುತ್ತದೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರ ಜಮಾವಣೆ ಮಾಡಲಾಗುತ್ತದೆ ಮತ್ತು ಯುವನಿಧಿ ಈ ವರ್ಷದ ಡಿಸೆಂಬರ್ ಅಥವಾ ಜನೆವರಿಯಲ್ಲಿ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು ಎಂದರು.
ಬಡವರಿಗೆ ಆರ್ಥಿಕ ಸಹಾಯ ಮಾಡುವುದರಿಂದ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿದಂತಾಗುತ್ತದೆ ಹಾಗೂ ಆರ್ಥಿಕತೆ ಬೆಳೆಯಲು ಸಹಾಯಕವಾಗುತ್ತದೆ. ನಮ್ಮ ಸರ್ಕಾರ ಬಡವರ ಪರ ಸರ್ಕಾರವಾಗಿದ್ದು ಎಲ್ಲರೂ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು. ಬೀದರ ಜಿಲ್ಲೆಯನ್ನು ಅಭಿವೃದ್ಧಿಶೀಲ ಜಿಲ್ಲೆಯನ್ನಾಗಿ ಮಾಡಲಾಗುವುದು, ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡಲು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ, ಒಳ್ಳೆಯ ಆಟದ ಮೈದಾನ, ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಗ್ರಂಥಾಲಯ, ಪೀಠೋಪಕರಣ, ಸುಸಜ್ಜಿತ ಶೌಚಾಲಯಗಳು ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಈಗಾಗಲೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಅದರಲ್ಲಿರುವ 5 ಸಾವಿರ ಕೋಟಿ ಹಣವನ್ನು ಈ ಭಾಗದ ಏಳು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗುವುದು. ಬೀದರ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆಯನ್ನು ನಿಗಿಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ಸುಧಾರಣೆ ಮಾಡುವುದು ಅವಶ್ಯಕತೆ ಇದ್ದು ಇದಕ್ಕಾಗಿ ಕೆ.ಕೆ.ಆರ್.ಡಿ.ಬಿ. ಯ ಮ್ಯಾಕ್ರೋದಡಿ 12 ಕೋಟಿ ರೂಪಾಯಿ ಹಣದಲ್ಲಿ ಮುಂದಿನ 3 ತಿಂಗಳೊಳಗಾಗಿ ಕ್ಯಾಥಲ್ಯಾಬ್ ಮಾಡಲಾಗುವುದು ಹಾಗೂ ಟ್ರಾಮಾ ಸೆಂಟರನ ಅವಶ್ಯಕತೆಯು ಇದೆ ಎಂದರು.
ಜಿಲ್ಲೆಯ 3 ಸಾವಿರ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುವುದು. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಅಂದಾಜು 3 ರಿಂದ 4 ಸಾವಿರ ಹುದ್ದೆಗಳು ಖಾಲಿ ಇವೆ ಇವುಗಳ ಭರ್ತಿಗೆ ಕ್ರಮ ವಹಿಸಲಾಗುವುದು, ಹುದ್ದೆಗಳು ಭರ್ತಿಯಾದರೆ ಆಡಳಿತ ಸುಧಾರಣೆಯ ಜೊತೆಗೆ ನಿರುದ್ಯೋಗ ಕಡಿಮೆಯಾಗುತ್ತದೆ. ಬೃಂದಾವನ ಮಾದರಿಯಲ್ಲಿ ಕಾರಂಜಾ ಜಲಾಶಯದ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ರಾಷ್ಟಿçÃಯ ಮಟ್ಟದ ಕ್ರೀಡಾಂಗಣವನ್ನು ಬೀದರ ಜಿಲ್ಲೆಯಲ್ಲಿ ಬರುವ ದಿನಗಳಲ್ಲಿ ಮಾಡಲಾಗುವುದು ಎಂದರು.
ಇದೇ ಆಗಸ್ಟ್ 21 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಭಾಲ್ಕಿಯ ಭೀಮಣ್ಣ ಖಂಡ್ರೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಾಜಿ (ಬಿ.ಕೆ.ಐ.ಟಿ.) ಯಲ್ಲಿ ಹಮ್ಮಿಕೊಂಡಿದ್ದು ಈ ಮೇಳದಲ್ಲಿ 2 ಸಾವಿರ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವಂತೆ ಮಾಡಲಾಗುತ್ತಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಬಿ.ಎ., ಬಿ.ಕಾಂ., ಬಿಎಸ್ಸಿ., ಡಿಪ್ಲೋಮಾ ಪದವಿಗಳನ್ನು ಪಡೆದ ಅಭ್ಯರ್ಥಿಗಳು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್, ವಿಧಾನ ಪರಿಷತ್ ಶಾಸಕ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಜಿಲ್ಲಾ ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ ಲಂಗೋಟಿ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಬಾಬುವಾಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣಪತಿ ಡಿ.ಕೆ., ಸೇರಿದಂತೆ ಇತರೇ ಅಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.