ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅದೇಶ
ಬೀದರ, ಆಗಸ್ಟ್.26 :- ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷರ‍್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯು ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಸದರಿ ಪೂರ್ವಭಾವಿ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ಅನುಕುಲವಾಗುವಂತೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೀದರ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಆದೇಶಿಸಿದ್ದಾರೆ.
ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ.ಮೊಬೈಲ್ ಪೇಜರ್, ಝಿರಾಕ್ಸ್, ಟೈಪಿಂಗ್, ಟ್ರೇನಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಅಂಗಡಿಗಳು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದು, ನಕಲು ಮಾಡುವ ಸಾಮಗ್ರಿಗಳು ಹಾಗೂ ಹೊರಗಿನಿಂದ ನಕಲು ಬರೆದ ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದು ಹಾಗೂ 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದು ನಿಷೇಧಿಸಲಾಗಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.