ಬೀದರ್

ನೀಟ್ ಪರೀಕ್ಷೆ ನಿಷ್ಪಕ್ಷಪಾತ ತನಿಖೆಗೆ ಎಸ್.ಎಫ್.ಐ ಆಗ್ರಹ

ನೀಟ್ ಫಲಿತಾಂಶದಲ್ಲಿ ಭಾರಿ ಆಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕದಲ್ಲಿ ಮೂಡಿರುವ ಆತಂಕಕ್ಕೆ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೆಂದ್ರ ಮೋದಿಯವರ ಸರ್ಕಾರದವಾಗಲಿ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ) ಜಿಲ್ಲಾಧ್ಯಕ್ಷರಾದ ಅರುಣ ಕೋಡಗೆ ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ.100 ಅಂಕ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಆಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾರ್ಪಗಳಾಗಿ ಹೊರಹೊಮ್ಮಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋನಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕಗಳಿಸಿದ್ದು, ಅಸಾದ್ಯ ಅನಿಸುತ್ತದೆ. ಇದು ಕಾಕತಾಳಿಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಬೇಕು ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷರಾದ ಅರುಣ ಕೋಡಗೆ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Ghantepatrike kannada daily news Paper

Leave a Reply

error: Content is protected !!