ಬೀದರ್

ನೂತನ ಸಂಸದ ಸಾಗರ ಖಂಡ್ರೆ ಅಭಿನಂದನಾ ಸಮಾರಂಭ

ಭಾಲ್ಕಿ: ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣನವರ ವಿಚಾರಧಾರೆ ಜಗದಗಲ ಮುಟ್ಟಿಸಲು ಕೇಂದ್ರ ಸರಕಾರದ ವತಿಯಿಂದ ಪ್ರತಿವರ್ಷ ಬಸವ ಜಯಂತಿ ಆಚರಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ನೂತನ ಸಂಸದ ಸಾಗರ ಖಂಡ್ರೆ ಅಭಿನಂದನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಹಲವು ವರ್ಷಗಳಿಂದ ಗೌತಮ ಬುದ್ಧ, ಮಹಾವೀರ ಜಯಂತಿಯನ್ನು ಕೇಂದ್ರ ಸರಕಾರ ಆಚರಿಸಿಕೊಂಡು ಬರುತ್ತಿದೆ. ಅದರಂತೆ ಬಸವ ಜಯಂತಿ ಕೂಡ ಕೇಂದ್ರ ಸರಕಾರದಿಂದ ಆಚರಿಸಲು ಕ್ರಮ ಕೈಗೊಳ್ಳಬೇಕಿದೆ.
ಈ ಬಗ್ಗೆ ನೂತನ ಸಂಸದ ಸಾಗರ ಖಂಡ್ರೆ ಅವರು ಕೇಂದ್ರ ಸರಕಾರದ ವತಿಯಿಂದ ಬಸವ ಜಯಂತಿ ಆಚರಣೆ ಮಾಡುವಂತೆ ಧ್ವನಿಯೆತ್ತಬೇಕು. ಕೇಂದ್ರದ ಮೇಲೆ ನಿರಂತರ ಒತ್ತಡ ತಂದು ಮನವರಿಕೆ ಮಾಡಿಕೊಟ್ಟರೇ ಮುಂಬರುವ ದಿನಗಳಲ್ಲಿ ಬಸವ ಜಯಂತಿ ಕೇಂದ್ರದಿAದ ಆಚರಣೆಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಸಂಸದ ಸಾಗರ ಖಂಡ್ರೆ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಮತ್ತೊಬ್ಬರೊಂದಿಗೆ ಯಾವತ್ತು ಹೋಲಿಕೆ ಮಾಡಿಕೊಳ್ಳಬಾರದು. ಪ್ರಾಮಾಣಿಕ ಪ್ರಯತ್ನ, ಪರಿಶ್ರಮದ ಮೂಲಕ ತಮ್ಮ ಕನಸು ನನಸಾಗಿಸಿಕೊಳ್ಳಬೇಕು. ತಂದೆ ತಾಯಿಗಳು ಮಕ್ಕಳ ಮೇಲೆ ಸಾಕಷ್ಟು ಆಸೆ, ಆಕಾಂಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಅವರ ಕನಸು ಈಡೇರಿಸುವ ಜಿಮ್ಮೇದಾರಿ ವಿದ್ಯಾರ್ಥಿಗಳ ಮೇಲಿರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ತರಗತಿ ಆರಂಭದಿAದಲೇ ಒದಿನತ್ತ ಗಮನ ಹರಿಸಬೇಕು. ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆಟ, ಪಾಠದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅಭ್ಯಾಸವನ್ನು ಯಶಸ್ವಿಯಾಗಿ ಪೂರೈಸಬೇಕು ಎಂದರು. ಗಡಿ ಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಕಟ್ಟಿರುವ ವಿದ್ಯಾ ದೇಗುಲದಲ್ಲಿ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಿ ಕೊಡುತ್ತಿರುವುದು ನನಗೆ ಅತ್ಯಂತ ಹೆಮ್ಮೆ ತರಿಸಿದೆ ಎಂದು ತಿಳಿಸಿದರು.
ನೇತೃತ್ವ ವಹಿಸಿದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಭಾಲ್ಕಿ ಹಿರೇಮಠ ಸಂಸ್ಥಾನದ ಬೆಳವಣಿಗೆಯಲ್ಲಿ ಭಕ್ತ ಸಮೂಹದ ದೊಡ್ಡ ಶಕ್ತಿಯಿದೆ. ಅದರಲ್ಲೂ ಖಂಡ್ರೆ ಮನೆತನದ ಪಾಲು ಹೆಚ್ಚಿದೆ. ಡಾ.ಭೀಮಣ್ಣ ಖಂಡ್ರೆ ಪರಿವಾರ ಶ್ರೀಮಠದ ಮೇಲೆ ಅಪಾರ ಶ್ರದ್ಧೆ, ಭಕ್ತಿ ಹೊಂದಿದೆ. ಸಚಿವ ಈಶ್ವರ ಖಂಡ್ರೆ ಅವರು ಈ ಭಾಗದ ಸಮಗ್ರ ಪ್ರಗತಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಪುತ್ರ, ನೂತನ ಸಂಸದರಾಗಿರುವ ಸಾಗರ ಖಂಡ್ರೆ ಅವರು ಜಿಲ್ಲೆಯ ಧ್ವನಿಯಾಗಿ ಕೇಂದ್ರದಲ್ಲಿ ಕೆಲಸ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು.
ಬಸವಕಲ್ಯಾಣ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ನೇತೃತ್ವ ವಹಿಸಿದರು. ಸಂಗಮೇಶ್ವರ ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜು ಸ್ಥಾನಿಕ ಕಮಿಟಿ ಅಧ್ಯಕ್ಷ ಧನರಾಜ ಬಂಬುಳಗೆ ಬಸವ ಗುರುವಿನ ಪೂಜೆ ನೆರವೇರಿಸಿದರು.
ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ ಸಂಗಮೇಶ ಹುಣಜೆ ಮದಕಟ್ಟಿ, ರವಿ ಬೊರವೇಲ್ಸ್ ಗ್ರೂಪ್‌ನ ಮಾಲೀಕ ರವೀಂದ್ರ ಚಿಡಗುಪ್ಪೆ, ಕಾಶಿನಾಥ ಲದ್ದೆ ಸೇರಿದಂತೆ ಹಲವರು ಇದ್ದರು.
ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ವಚನ ಗಾಯನ ನಡೆಸಿ ಕೊಟ್ಟರು. ಬಸವಜಯಂತಿ ವಚನ ಪ್ರಾರ್ಥನೆ ನಡೆಸಿ ಕೊಟ್ಟರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಬಸವರಾಜ ಪ್ರಭಾ ವಂದಿಸಿದರು.
Ghantepatrike kannada daily news Paper

Leave a Reply

error: Content is protected !!