Uncategorized

ಪದವೀಧರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಿ -ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಬೀದರ. ಅಕ್ಟೋಬರ. 26.:- ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿಮಾಡಲು ನವೆಂಬರ 6 ಕೊನೆಯ ದಿನವಾಗಿದ್ದು ಜಿಲ್ಲೆಯ ಎಲ್ಲಾ ಪದವೀಧರ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆAದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಈಶಾನ್ಯ ಪದವೀಧರ ಮತದಾರರ ನೋಂದಣಿ ಕುರಿತು ಜಿಲ್ಲೆಯ ನೌಕರರು. ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇತರರಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಎಮ್.ಎಲ್.ಸಿ ಚುನಾವಣೆಗಳು ಬರುತ್ತಿರುವದರಿಂದ 01-11-2020 ಕ್ಕಿಂತ ಮುಂಚೆ ಪದವಿ ಪಾಸ ಆದವರು ನಮೂನೆ- 18 ಫಾರ್ಮ್ ಭರ್ತಿ ಮಾಡಿ ಈಶಾನ್ಯ ಪದವೀಧರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಮತ್ತು ಪದವಿ ಮುಗಿಸಿ ಇನ್ನೂ ತಮ್ಮ ಹೆಸರು ನೋಂದಾಯಿಸದ ಸರಕಾರಿ ನೌಕರರು ಹಾಗೂ ಪದವಿ ಪಡೆದವರು ತಮ್ಮ-ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.
2018 ಪ್ರಕಾರ ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಪದವೀಧರರು ಈಶಾನ್ಯ ಪದವೀಧರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಣಿಮಾಡಿದ್ದು ಇಲ್ಲಿಯವರೆಗೆ 5772 ಜನ ನೋಂದಣಿಮಾಡಿಕೊAಡಿದ್ದು ಜಿಲ್ಲೆಯಲ್ಲಿ 20 ಸಾವಿರ ಪದವೀಧರರನ್ನು ನೋಂದಣಿಮಾಡುವ ಗುರಿ ಹೊಂದಲಾಗಿದ್ದು ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಪದವಿ ಮುಗಿಸಿ ಹೋದ ವಿದ್ಯಾರ್ಥಿಗಳಿಗೆ ಈಶಾನ್ಯ ಪದವೀಧರ ಮತದಾರರ ಪಟ್ಟಿಯಲ್ಲಿ ಅವರು ಹೆಸರು ನೋಂದಾಯಿಸಲು ತಾವು ಹೇಳಬೇಕೆಂದು ಹೇಳಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹೇಶ ಮೇಘಣ್ಣವರ,ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಚುನಾವಣಾ ತಹಶೀಲ್ದಾರ ಗೋಪಾಲ ಕಪೂರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ. ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ ಗಂಧಗೆ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!