ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಪ್ರತಿಷ್ಠಾನೆಮಾಡಿ -:ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ, ಆಗಸ್ಟ್ 26:- ಪರಿಸರ ಸ್ನೇಹಿ ಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಗಳ ಪ್ರತಿಷ್ಠಾನೆಮಾಡಿ ಇದರಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬೀದರ ನಗರದ ವಿವಿಧ ಗಣೇಶ ಮಹಾಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಕರೆದ ಗಣೇಶ ಚತುರ್ಥಿ ಶಾಂತಿಪಾಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ಮೂರ್ತಿಗಳ ಪ್ರತಿμÁ್ಠಪನೆ ಮಾಡಬಾರದು ಇದರಿಂದ ಪರಿಸರಕ್ಕೆ ಹಾನಿಯಾಗಲಿದೆ. ಮಣ್ಣಿನಿಂದ ತೈಯಾರಿಸಿದ ಉತ್ತಮ ಪರಿಸರ ಸ್ನೇಹಿ ಗಣೇಶ ಪ್ರತಿμÁ್ಠಪನೆ ಮಾಡುವವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ನೀಡಲಾಗುವುದು. ಲೌಡ ಸ್ಪೀಕರ್ ರಾತ್ರಿ 10 ಗಂಟೆಗಳವರೆಗೆ ಉಪಯೋಗಿಸಬೇಕು ಮತ್ತು ಹೆಚ್ಚು ಶಬ್ದವನ್ನು ಇಟ್ಟು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಗಣೇಶ ಹಬ್ಬಕ್ಕೆ ಪೆÇಲೀಸ್, ನಗರಸಭೆ, ಜೆಸ್ಕಾಂ ಹಾಗೂ ಸಂಬಂಧಿಸಿದ ಇಲಾಖೆಯವರು ಅನುಮತಿ ನೀಡುತ್ತಾರೆ. ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಮೂಲಕ ಪ್ರತಿ ವರ್ಷದಂತೆ ಈ ವರ್ಷವು ಸೆಪ್ಟೆಂಬರ್ 7 ರಿಂದ 11 ರವರೆಗೆ ನಡೆಯುವ ಗಣೇಶ ಹಬ್ಬವನ್ನು ಬೀದರ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಎಲ್ಲರೂ ಸೇರಿ ಆಚರಿಸೋಣ ಎಂದು ಹೇಳಿದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪ್ರದೀಪ್ ಗುಂಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಶಾಂತಿಯುತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಬೇಕು. ಗಣೇಶ ಪ್ರತಿμÁ್ಠಪನೆ ಮಂಡಳಿಯವರು ತಮ್ಮ ಸದಸ್ಯರಿಗೆ ಐಡಿ ಕಾರ್ಡಗಳನ್ನು ನೀಡಬೇಕು. ಮತ್ತು ನಮ್ಮ ಪೆÇಲೀಸ್ ಸಿಬ್ಬಂದಿಯವರಿಗೆ ತಮ್ಮ ಮಂಡಳಿಯಿಂದ ಸಹಕಾರ ನೀಡಬೇಕು. ಎಲ್ಲಾ ಕಡೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುವುದು. ದೊಡ್ಡ ಮಟ್ಟದಲ್ಲಿ ಗಣೇಶ ಪ್ರತಿμÁ್ಠಪನೆ ಮಾಡಿದ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಕೋವು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡುವ ಪೆÇೀಸ್ಟರ್, ಬ್ಯಾನರಗಳನ್ನು ಅಳವಡಿಸಬಾರದು, ಲೌಡಸ್ಪೀಕರ್, ಡಿಜೆಗಳ ಶಬ್ದ 25 ರಿಂದ 30 ಡೆಸಿಬಲಗಳಿಗಿಂತ ಹೆಚ್ಚು ಇರದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಗಣೇಶ ಮಂಡಳಿ ಸದಸ್ಯರು ಮಾತನಾಡಿ ಕಳೆದ 40 ವರ್ಷಗಳಿಂದ ಗಣೇಶ ಹಬ್ಬವನ್ನು ಬೀದರ ಜಿಲ್ಲೆಯಲ್ಲಿ ಶಾಂತಿಯುತವಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದೆವೆ ಅದರಂತೆ ಈ ವರ್ಷ ಆಚರಣೆ ಮಾಡುತ್ತೆವೆ. ಮಳೆಗಾಲ ಇರುವುದರಿಂದ ಗಣೇಶ ಕೂಡಿಸುವ ಸ್ಥಳಗಳಲ್ಲಿ ನಗರ ಸಭೆ ವತಿಯಿಂದ ಸ್ವಚ್ಚತೆ ಮಾಡಿಸಬೇಕು. ಲೋಡ ಶೆಡ್ಡಿಂಗ್ ಆಗದಂತೆ ನೋಡಿಕೊಳ್ಳಬೇಕು. ಬೀದರ ನಗರದ ಕೆಲವು ರಸ್ತೆಗಳಲ್ಲಿ ಪಾಟಹೋಲ ಬಿದ್ದಿದ್ದು ಅವುಗಳನ್ನು ನಗರಸಭೆ ವತಿಯಿಂದ ಸರಿಪಡಿಸಬೇಕು. ಗಣೇಶ ಚತುರ್ಥಿ ಸಂದರ್ಭದಲ್ಲಿ ಶಾಂತಿ ಪಾಲನೆಯಲ್ಲಿ ಪೆÇಲೀಸರ ಪಾತ್ರವು ಬಹಳ ಇದೆ ಎಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರಡಿಯಾ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಮಹೇಶ ಮೆಘಣ್ಣವರ, ಡಿವೈಎಸ್ಪಿ ಶಿವನಗೌಡ ಪಾಟೀಲ ಹಾಗೂ ನಗರಸಭೆ. ಜೆಸ್ಕಾ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಮತ್ತು ಬೀದರ ನಗರದ ವಿವಿಧ ಗಣೇಶ ಮಹಾಮಂಡಳಿಯ ಅಧ್ಯಕ್ಷರು. ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.