ಪಾಠಶಾಲೆ ಮಕ್ಕಳಿಂದ ಭಜನೆ ಕಾರ್ಯಕ್ರಮ
ಬೀದರ್ : ಸಪ್ತಸ್ವರ ಕಲಾ ಸಂಸ್ಥೆ ನಾಗಮಾರಪಳ್ಳಿ ವತಿಯಿಂದ ನಗರದ ಪಾಪನಾಶ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಸಂಗೀತ ಸಂಸ್ಕ್ರತಿ ಕಾರ್ಯಕ್ರಮ ಜರುಗಿತು.
ಭಜನೆ ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಶ್ರಾವಣ ಮಾಸದ ಪ್ರಯುಕ್ತ ವಿವಿಧೆಡೆ ಭಜನೆ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಪಾಪನಾಶ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಠ ಶಾಲೆಯ ವಿದ್ಯಾರ್ಥಿಗಳು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳು ಪಾಠ ಶಾಲೆಯ ವಿದ್ಯಾರ್ಥಿಗಳ ಕಲಾಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನ ನಾಗಮಾರಪಳ್ಳಿ ತಿಳಿಸಿದ್ದಾರೆ.