ಬೀದರ್

ಬಾಲ್ಯ ವಿವಾಹ ಜಾಗೃತಿಗೆ 10ಕ್ಕೆ ವಾಕ್‍ಥಾನ್

ಬೀದರ್: ಬಾಲ್ಯ ವಿವಾಹ ನಿಷೇಧ ಕುರಿತು ಜನ ಜಾಗೃತಿ ಮೂಡಿಸಲು ನಗರದಲ್ಲಿ ಆಗಸ್ಟ್ 10 ರಂದು ವಿವಿಧ ಇಲಾಖೆ ಹಾಗೂ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ವಾಕ್‍ಥಾನ್ ಹಾಗೂ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ನಗರದ ಜಹೀರಾಬಾದ್ ರಸ್ತೆಯಲ್ಲಿ ಇರುವ ಕರ್ನಾಟಕ ಕಾಲೇಜು ಬಳಿಯಿಂದ ಪ್ರಮುಖ ಬೀದಿಗಳಲ್ಲಿ ವಾಕ್‍ಥಾನ್ ಜರುಗಲಿದೆ.
ಬಳಿಕ ಬೆಳಿಗ್ಗೆ 10.30ಕ್ಕೆ ಕೆ.ಆರ್.ಇ. ಸಂಸ್ಥೆಯ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ, ಮಧ್ಯಾಹ್ನ1ಕ್ಕೆ ಸಿಎಂಪಿಒಗಳ ತರಬೇತಿ ನಡೆಯಲಿದೆ.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅಧ್ಯಕ್ಷತೆ ವಹಿಸುವರು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪ ಕನಕಟ್ಟೆ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಕೆಆರ್‍ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಲೀಂ ಪಾಶಾ, ವಿದ್ಯಾನಿಕೇತನ ಸಂಸ್ಥೆಯ ನಿರ್ದೇಶಕ ಡಾ. ನಾಗರಾಜ ಎಂ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಕರ್ನಾಟಕ ಕಾಲೇಜು ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಹಂಗರಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ಬಾಲ್ಯ ವಿವಾಹ ವಿರೋಧಿ ವೇದಿಕೆಯ ವೆಂಕಟೇಶ ಟಿ. ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ, ವಿದ್ಯಾನಿಕೇತನ ಸಂಸ್ಥೆ, ಚೈಲ್ಡ್ ರೈಟ್ಸ್ ಟ್ರಸ್ಟ್ ಹಾಗೂ ಕರ್ನಾಟಕ ಬಾಲ್ಯ ವಿವಾಹ ವಿರೋಧಿ ವೇದಿಕೆ ಸಹಯೋಗದಲ್ಲಿ ವಾಕ್‍ಥಾನ್ ಹಾಗೂ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

Ghantepatrike kannada daily news Paper

Leave a Reply

error: Content is protected !!