ಬೀದರ್

ಬೀದರ ಜಿಲ್ಲೆಗೆ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

ಬೀದರ, ಜುಲೈ.12 : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಜುಲೈ.13 ರಂದು ಬೆಳಿಗ್ಗೆ 8.10ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟು 9.35ಕ್ಕೆ ಕಲಬುರಗಿ ಆಗಮಿಸಿ ಕಲಬುರಗಿಯಿಂದ ಹುಮನಾಬಾದ ರಸ್ತೆ ಮೂಲಕ ಭಾಲ್ಕಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಶತಮಾನ ಕಂಡ ಭಾಲ್ಕಿ ಹಿರೇಮಠ ಸಂಸ್ಥಾನದ ಕನ್ನಡ ಶಾಲೆಗೆ ಭೇಟಿ ಮತ್ತು ಚರ್ಚೆ, ಮಧ್ಯಾಹ್ನ 3 ರಿಂದ ಶತಮಾನ ಕಂಡ ಮೆಥೋಡಿಸ್ಟ್ ಕನ್ನಡ ಶಾಲೆಗೆ ಭೇಟಿ ಮತ್ತು ಪರಿಶೀಲನೆ ಹಾಗೂ ಸಂಜೆ 6 ಗಂಟೆಗೆ ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರು ಆಯೋಜಿಸಿರುವ ಕನ್ನಡ ವೈದ್ಯರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನೆ ಮಾಡಿ ನಂತರ ಬೀದರ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜುಲೈ.14 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಜಗನ್ನಾಥ ಹೆಬ್ಬಾಳೆ ಅವರ ಅಭಿನಂದನಾ ಗ್ರಂಥದ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಸರಕಾರಿ ಅತಿಥಿ ಗೃಹದಲ್ಲಿ ಬೀದರ ಜಿಲ್ಲೆಯ ಕನ್ನಡ ಪರ ಸಂಘಟನೆಗಳೊAದಿಗೆ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಮಹಮದ್ ಗವಾನ್ ರವರ ಗ್ರಂಥಾಲಯಕ್ಕೆ ಭೇಟಿ ನೀಡಿ ನಂತರ ಬೀದರ ಅತಿಥಿ ಗೃಹದಲ್ಲಿ ವಾಸ್ತವ್ಯಮಾಡಲಿದ್ದಾರೆ.
ಜುಲೈ.15 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಂದಿನಗರದಲ್ಲಿ ಬೀದರ ಜಿಲ್ಲೆಯ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಬೀದರ ವಿಶ್ವವಿದ್ಯಾಲಯಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ ನಂತರ ಬೀದರದಿಂದ ರಸ್ತೆ ಮಾರ್ಗವಾಗಿ ಕಲಬುರಗಿಗೆ ಪ್ರಯಾಣಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!