ಬೀದರ್

ಬೀದರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅಧಿಕಾರ ಸ್ವೀಕಾರ

ಬೀದರ, ಜುಲೈ.5 : ಬೀದರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು.
ಶಿಲ್ಪಾ ಶರ್ಮಾ ಅವರು ಕರ್ನಾಟಕ ಕ್ಯಾಡರ್ 2015 ರ ಐ.ಎ.ಎಸ್ ಬ್ಯಾಚನ ಅಧಿಕಾರಿಯಾದ ಇವರು ಮೂಲತಃ ಹಿಮಾಚಲ ಪ್ರದೇಶದವರಾಗಿದ್ದಾರೆ. 2018 ರಲ್ಲಿ ಇವರು ರಾಯಚೂರು ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಂತರ ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿರುತ್ತಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರಾಗಿ ಹಾಗೂ ಪಂಚಾಯತ ರಾಜ್ ಇಲಾಖೆಯಲ್ಲಿ ಆಯುಕ್ತರಾಗಿ ಮತ್ತು ಕರ್ನಾಟಕ ವಿದ್ಯುತ್ ಕಾರ್ಖಾನೆ ಬೆಂಗಳೂರಿನಲ್ಲಿ ವ್ಯವಸ್ಥಾಪಕ ನಿರ್ದೆಶಕರಾಗಿಯು ಕರ್ತವ್ಯ ನಿರ್ವಹಿಸಿದ್ದಾರೆ.
ಬೀದರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ ಶಿಲ್ಪಾ ಶರ್ಮಾ ಅವರು ಇಂದು ಬೀದರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದೆನೆ. ಜಿಲ್ಲೆಯ ಅಭಿವೃದ್ಧಿ ಒತ್ತು ನೀಡಲಾಗುವುದು. ಇದಕ್ಕೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು. ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ನಮ್ಮೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬೀದರ ಜಿಲ್ಲೆಯ ವಿವಿಧ ಜನಪರ ಸಂಘಟನೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಛೇರಿ ಅಧಿಕಾರಿ ಮತ್ತು ಸಿಬ್ಬಂದಿಗಳು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಚ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತರಾದ ಲವೀಶ್ ಒರಡಿಯಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಛೇರಿಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು

Ghantepatrike kannada daily news Paper

Leave a Reply

error: Content is protected !!