ಮಂದಕನಳ್ಳಿ ಗ್ರಾ.ಪಂ: ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ
ಬೀದರ್: ತಾಲ್ಲೂಕಿನ ಮಂದಕನಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.
ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಶೀನಾಥ ಸುಭಾಷ್ ಗೌರಶೆಟ್ಟಿ ಮಂದಕನಳ್ಳಿ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಬಾಯಿ ಪುಂಡಲೀಕಪ್ಪ ಕಂಗನಕೋಟ್ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಶಾಲು ಹೊದಿಸಿ ಸನ್ಮಾನಿಸಿದರು.