ರಕ್ತದಾನ ಶಿಬಿರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸಸಿಗೆ ನೀರೆರೆದು ಚಾಲನೆ ನೀಡಿದರು
ಬೀದರ್: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ ಹಾಗೂ ಪೊಬ ಕಲ್ಯಾಣ ಸೇವೆಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ಸ್ವತಃ ರಕ್ತದಾನ ಮಾಡಿ ಶಿಬಿರಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು, ರಕ್ತದಾನ ಶ್ರೇಷ್ಠ ದಾನವಾಗಿದೆ ಎಂದು ತಿಳಿಸಿದರು.
ರಕ್ತದಾನವು ಅಪಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ನೆರವಾಗುತ್ತದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಮಾತನಾಡಿ, ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೊಸ ಉತ್ಸಾಹ ಹಾಗೂ ಚೈತನ್ಯ ಮೂಡುತ್ತದೆ ಎಂದು ತಿಳಿಸಿದರು.
ಸರ್ಕಾರಿ ನೌಕರರು ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದೆ ಬರಬೇಕು ಎಂದರು.
ಶಿಬಿರದಲ್ಲಿ 52 ಯುನಿಟ್ ರಕ್ತ ಸಂಗ್ರಹವಾಯಿತು. ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶರಣಪ್ಪ ಮುಡಬಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕಿರಣ ಪಾಟೀಲ, ಜಿಲ್ಲಾ ಡಿ.ವಿ.ಬಿ.ಡಿ.ಸಿ.ಪಿ. ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಂಕರೆಪ್ಪ ಬೊಮ್ಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಅನಿಲ್ ಚಿಂತಾಮಣಿ, ವಿವಿಧ ಸಂಘಗಳ ಪ್ರಮುಖರಾದ ಡಾ. ದೇವಕಿ ನಾಗೂರೆ, ಯೇಸುದಾಸ್ ಥೋರೆ, ಶಿವಕುಮಾರ ಗುಮ್ಮಾ, ಶಕುಂತಲಾ ಕಾಡಾದೆ, ರವಿ ವಗ್ಗೆ, ಪ್ರದೀಪ್, ಸ್ವಾಮಿ ವಿವೇಕಾನಂದ, ಶಮಿ ಪಟೇಲ್, ವಿದ್ಯಾಸಾಗರ, ಸಂಗಮೇಶ ರೆಡ್ಡಿ ಮೊದಲಾದವರು ಇದ್ದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸೋಹೆಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಅನಿಲ್ ಎಕಲೂರೆ ಸ್ವಾಗತಿಸಿದರು. ಡಾ. ಸತೀಶ್ ಪಾಟೀಲ ಸ್ವಾಗತಿಸಿದರು. ಸುನೀಲ್ ಕಸ್ತೂರೆ ವಂದಿಸಿದರು.