ಬೀದರ್

ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೀದರ, ಆಗಸ್ಟ್ 16 -ಬೀದರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರಡಿಯಲ್ಲಿ, 2023 ನೇ ಸಾಲಿನ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಶಸ್ತಿ ಪಡೆಯುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಆಸಕ್ತಿಯುಳ ವ್ಯಕ್ತಿ ಹಾಗೂ ಸಂಸ್ಥೆಯವರು 2023ರ ಸೆಪ್ಟೆಂಬರ್ 15 ರೊಳಗಾಗಿ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ – ಬೀದರ ದೂರವಾಣಿ ಸಂಖ್ಯೆ: 08482-234237ಕ್ಕೆ ಸಂಪರ್ಕಿಸುವAತೆ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!