ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೆ ದೇಶಾದ್ಯಂತ ಬಾರಿ ಹೋರಾಟದ ಎಚ್ಚರಿಕೆ: ಕುರುಬುರ ಶಾಂತಕುಮಾರ
ಬೀದರ್: ಕೇಂದ್ರ ಸರ್ಕಾರ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಬಗ್ಗೆ ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರೈತ ಹೋರಾಟದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡು ಮೂರು ಕೃಷಿ ಕಾಯ್ದೆಗಳನ್ನ ರದ್ದು ಮಾಡಿದ ಪ್ರಧಾನಿಯವರು. ಡಾ ಸ್ವಾಮಿನಾಥನ್ ಆಯೋಗದ ವರದಿಯಂತೆ ಎಂ ಎಸ್ ಪಿ ಕಾತ್ರಿ ಕಾನೂನು ಜಾರಿಗೆ ತರಲು ಸಮಿತಿಯನ್ನು ರಚಿಸಿ ಎರಡು ವರ್ಷವಾದರೂ ಕಾರ್ಯರೂಪಕ್ಕೆ ಬಂದಿಲ್ಲ ಈ ಬಗ್ಗೆ ವಿರೋಧಿ ಪಕ್ಷಗಳ ಸಂಸದರು. ಸಂಸತ್ ನಲ್ಲಿ ಖಾಸಗಿ ಮಸೂದೆ ಮಂಡಿಸುವಂತೆ. ದೇಶಾದ್ಯಂತ ರೈತ ಸಂಘಟನೆಗಳು ಎಂಟು. ಒಂಬತ್ತನೇ. ತಾರೀಕು ಮನವಿ ಪತ್ರ ನೀಡಿ ಒತ್ತಾಯಿಸಲಾಗಿದೆ. ಮುಂದಿನ ಹೋರಾಟ ದೇಶಾದ್ಯಂತ ತೀವ್ರಗೊಳಿಸಲು 22ರಂದು ದೆಹಲಿಯಲ್ಲಿ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ
ಗುರುವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ಸಕ್ಕರೆ ಕಾರ್ಖಾನೆಗಳು ಇಳುವರಿ ತೋರಿಸುವಲ್ಲಿ, ತೂಕದಲ್ಲಿ, ಉಪ ಉತ್ಪನ್ನಗಳ ಲಾಭ ಹಂಚಿಕೆಯಲ್ಲಿ, ಮೋಸ ಮಾಡುತ್ತಾ ರೈತರನ್ನ ವಂಚಿಸುತ್ತಿದ್ದಾರೆ. ಕಬ್ಬು ಬೆಳೆಗಾರರ ಹಣ ಸಕ್ಕರೆ ಕಾರ್ಖಾನೆಗಳು ಪಾವತಿಸದೆ ರೈತರನ್ನ ಸಂಕಷ್ಟಕ್ಕೆ ದುಡುತ್ತಿದ್ದಾರೆ ರೈತರ ಹಣ ನೀಡದ ರೈತರನ್ನು ವಂಚಿಸುವ ಕಾರ್ಖಾನೆಗಳ ರಹಧಾರಿ ಅಮಾನತ್ತು ಮಾಡಬೇಕು. ಕಬ್ಬು ಪ್ರದೇಶ ಉತ್ಪಾದನೆ ಕಡಿಮೆ ಇರುವ ಕಾರಣ ಪ್ರಸಕ್ತ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಪೈಪೋಟಿಯಲ್ಲಿ ಕಬ್ಬು ಕರಿದಿಸಲು ಮುಂದಾಗುತ್ತಿವೆ. ರೈತರು ಜಾಗೃತರಾಗಿ ಎಫ್ಆರ್‌ಪಿ ದರಕಿಂತ ಹೆಚ್ಚು ಬೆಲೆ ನೀಡುವ ಕಾರ್ಖಾನೆಗಳಿಗೆ ಕಬ್ಬುಸರಬರಾಜು ಮಾಡಬೇಕು ಈಗಾಗಲೇ ಬೇರೆ ಬೇರೆ ಜಿಲ್ಲೆಗಳಲ್ಲಿ ಕೆಲವು ಕಾರ್ಖಾನೆಗಳು ಹೊಸದಾಗಿ ಕಬ್ಬು ಹಾಕುವ ರೈತರಿಗೆ ಕಬ್ಬಿನ ಬೀಜಕ್ಕಾಗಿ 8000 ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಹಾಗೂ ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಯವರೇ. ಬರಿಸಿಕೊಳ್ಳುತ್ತೇವೆ ಎನ್ನುತ್ತಿದ್ದಾರೆ.
ಕೇಂದ್ರ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡಲು ಮುಂದಾಗಬೇಕು ಎಂದರು.
ಕಾಡಂಚಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳು ರೈತರ ಬೆಳೆಗಳನ್ನು ಹಾಳು ಮಾಡುತ್ತಿದ್ದು ಅರಣ್ಯ ಇಲಾಖೆ ಬೇಜವಾಬ್ದಾರಿತನ ತೋರುತ್ತಿದೆ. ಈ ಬಗ್ಗೆ ಅರಣ್ಯ ಸಚಿವರು ಈಶ್ವರ್ ಖಂಡ್ರೆ ಕೂಡಲೇ ರಾಜ್ಯಮಟ್ಟದಲ್ಲಿ ರೈತ ಮುಖಂಡರು ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಅರಿತುಕೊಂಡು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದವರು ತಿಳಿಸಿದರು.
ಬೆಳೆ ವಿಮೆ ಕಟ್ಟಿರುವ ರೈತರಿಗೆ ಪರಿಹಾರದ ಹಣ ನ್ಯಾಯ ಯುತವಾಗಿ ಬರುತ್ತಿಲ್ಲ ವಿಮಾ ಕಂಪನಿಗಳು ರೈತರ ಕಣ್ಣಿಗೆ ಮಣ್ಣೆರಚುತಿದ್ದಾರೆ, ನಕಲಿ ಬಿತ್ತನೆ ಬೀಜ,ನಕಲಿ ಗೊಬ್ಬರ, ನಕಲಿ ಕೀಟ ಕೀಟನಾಶಕ, ಮಾರಾಟಕ್ಕೆ ತಡೆಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಹೇಳಿದರು.
ತೆಲಂಗಾಣ ಕಾಂಗ್ರೆಸ್ ಸರ್ಕಾರ ರೈತರಿಗೆ ವರ್ಷಕ್ಕೆ ಗೊಬ್ಬರ ಬಿತ್ತನೆ ಬೀಜ ಖರೀದಿಸಲು ಎಕರೆಗೆ 15000 ಪ್ರೋತ್ಸಾಹಧನ ನೀಡುತ್ತಿದ್ದಾರೆ.
ರಾಜ್ಯದಲ್ಲಿ ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಮ್ಮಾನ್ ಯೋಜನೆಯಲ್ಲಿ ರಾಜ್ಯ ಸರ್ಕಾರ ಕೂಡ 6000 ನೀಡಲು ಮುಂದಾಗಬೇಕು,. ಕೃಷಿ ಸಾಲ ನೀತಿ ಬದಲಾಗಬೇಕು, ರೈತನ ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಶೇಕಡಾ 75 ರಷ್ಟು ಸಾಲ ನೀಡುವ ಯೋಜನೆ ಜಾರಿಗೆ ತರಬೇಕು, ಅತಿವೃಷ್ಟಿ, ಅನಾವೃಷ್ಟಿ, ಮಳೆ ಹಾನಿ, ಬರ ಪರಿಹಾರ, ನಷ್ಟ ಎನ್‌ಡಿಆರ್‌ಎಫ್ ಮಾನದಂಡ ಬದಲಾಗಬೇಕು ವೈಜ್ಞಾನಿಕ ಪರಿಹಾರ ಕೂಡಲೇ ಸಿಗುವಂತಾಗಬೇಕು ಎಂದರು.
ಪತ್ರಿಕಾಗೋಷ್ಟಿಯಲ್ಲಿ
ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ಹತಿವಾಳ, ರಾಜ್ಯ ಉಪಾಧ್ಯಕ್ಷ ಬಸವರಾಜ ಪಾಟೀಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್ ಹಾಗೂ ಅವಿನಾಶ ಇದ್ದರು