ಬೀದರ್

ರೋಟರಿ ಕ್ಲಬ್‍ನಿಂದ ವ್ಯಸನ ಮುಕ್ತ ದಿನಾಚರಣೆ ದುಶ್ಚಟಗಳ ಭಿಕ್ಷೆ ಬೇಡಿದ್ದ ಮಹಾಂತ ಶ್ರೀಗಳು

ಬೀದರ್: ಇಳಕಲ್‍ನ ಮಹಾಂತ ಶಿವಯೋಗಿಗಳು ಜೋಳಿಗೆ ಹಿಡಿದು ದುಶ್ಚಟಗಳ ಭಿಕ್ಷೆ ಬೇಡಿದ್ದರು. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು ಎಂದು ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.
ನಗರದ ಐ.ಎಂ.ಎ. ಹಾಲ್‍ನಲ್ಲಿ ರೋಟರಿ ಕ್ಲಬ್ ಬೀದರ್ ವತಿಯಿಂದ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಿನೆಲ್ಲೆಡೆ ಹಲವು ಮಠ, ಪೀಠಗಳಿವೆ. ಅನೇಕ ಮಠಾಧೀಶರು ಹಣಕ್ಕಾಗಿ ಭಿಕ್ಷೆ ಬೇಡಿದರೆ, ಮಹಾಂತ ಶಿವಯೋಗಿಗಳು ಮಾತ್ರ ಊರು, ಕೇರಿಗಳನ್ನು ಸುತ್ತಿ ಜೋಳಿಗೆಯಲ್ಲಿ ಭಿಕ್ಷೆ ರೂಪದಲ್ಲಿ ದುಶ್ಚಟಗಳನ್ನು ಬೇಡಿದ್ದರು. ದುವ್ರ್ಯಸನ, ದುಶ್ಚಟಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಬಹಳಷ್ಟು ಜನರ ಮನ ಪರಿವರ್ತನೆ ಮಾಡಿದ್ದರು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಾಂತ ಕಾಡಾದಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವಕರು ದುಶ್ಚಟಗಳ ದಾಸರಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಕಳವಕಾರಿಯಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳು ಜತೆಗೂಡಿ ನಶೆ ಮುಕ್ತ ಬೀದರ್ ಜಿಲ್ಲೆ ನಿರ್ಮಾಣಕ್ಕೆ ಪಣ ತೊಡಬೇಕಿದೆ ಎಂದು ತಿಳಿಸಿದರು.
ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯು ಪೊಲಿಯೊ ನಿರ್ಮೂಲನೆ, ಶಿಕ್ಷಣ, ಆರೋಗ್ಯ, ಪರಿಸರ, ಮಹಿಳಾ ಸಬಲೀಕರಣ ಮೊದಲಾದ ಕ್ಷೇತ್ರಗಳಿಗೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕ್ಲಬ್ ಮಾಜಿ ಅಧ್ಯಕ್ಷ ಹಾವಶೆಟ್ಟಿ ಪಾಟೀಲ, ಉದ್ಯಮಿ ಶಂಕರರಾವ್ ಕೊಟರಕಿ ಇದ್ದರು. ಕ್ಲಬ್ ಕಾರ್ಯದರ್ಶಿ ಸೋಮಶೇಖರ ಪಾಟೀಲ ಸ್ವಾಗತಿಸಿದರು. ಖಜಾಂಚಿ ಅನಿಲ್ ಮಸೂದಿ ವಂದಿಸಿದರು.

Ghantepatrike kannada daily news Paper

Leave a Reply

error: Content is protected !!