ವಸತಿ ನಿಲಯದಿಂದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ-ಸಚಿವರ ಈಶ್ವರ ಬಿ.ಖಂಡ್ರೆ
ಬೀದರ, ಜುಲೈ.29 :- ಜಿಲ್ಲೆ, ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಇಂತಹ ವಸತಿ ನಿಲಯದ ಅವಶ್ಯಕವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ವಸತಿ ನಿಲಯ ಕಟ್ಟಡದ ಶಂಕುಸ್ಥಾಪನೆ ಕರ್ಯಕ್ರಮ ನೆರವೇರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನರ್ಮಾಣ ಮಾಡುತ್ತಿರುವ ಈ ವಸತಿ ನಿಲಯ ಕಟ್ಟಡವು ಸುಮಾರು 3 ಕೋಟಿ 25 ಲಕ್ಷ ರೂ. ವೆಚ್ಚದಲ್ಲಿ ನರ್ಮಾಣ ಮಾಡಲಾಗುತ್ತಿದೆ. ಇದರಿಂದ ಸುಮಾರು 75 ರಿಂದ 100 ಕ್ರೀಡಾಪಟುಗಳಿಗೆ ನಿಲಯದಲ್ಲಿ ವಾಸ್ತವ್ಯ ಮಾಡಲು ಅನುಕೂಲವಾಗಲಿದೆ. ಇಂದಿನ ಸ್ರ್ಧಾತ್ಮಕ ಯುಗದಲ್ಲಿ ವಿವಿಧ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಉತ್ತಮ ಕ್ರೀಡಾಪಟುಗಳನ್ನು ತಯ್ಯಾರು ಮಾಡಬೇಕಾಗಿದೆ ಎಂದು ಹೇಳಿದರು.
ಈ ಕರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್, ನಗರಸಭೆ ಅಧ್ಯಕ್ಷರಾದ ಮೋಹ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕರ್ಯನರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಯುವಜನ ಸೇವಾ ಇಲಾಖೆಯ ಸಹಾಯಕ ನರ್ದೇಶಕ ಅಮೃತ ಅಷ್ಟಗಿ ಸೇರಿದಂತೆ ಕ್ರೀಡಾಭಿಮಾನಿಗಳು, ಕ್ರೀಡಾಸ್ತಕರು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.