ವಿದ್ಯಾರ್ಥಿಗಳು ಉತ್ತಮಗುರಿ ಹೊಂದಬೇಕು ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಕೋರ್ಸ ಪ್ರಾರಂಭ
ಮುಂಬರುವ ೨೦೪೭ರಲ್ಲಿ ಭಾರತವು ವಿಶ್ವಗುರು ಆಗುತ್ತದೆ ವಿದ್ಯಾರ್ಥಿಗಳೆಲ್ಲರು ಉತ್ತಮ ಶಿಕ್ಷಣ ಪಡೆದು ದೇಶದಲ್ಲಿ ಉನ್ನತ ಸ್ಥಾನ ಅಲಂಕರಿಸಿ ದೇಶದ ಗೌರವ ಹೆಚ್ಚಿಸಬೇಕು ಎಂದು ಬೀದರ್ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಅವರು ಇಂದು ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೩- ೨೪ನೇ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಬಿ.ಎ., ಬಿ.ಕಾಂ, ಬಿ.ಎಸ್ಸಿ ಹಾಗೂ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಹೊಸದಾಗಿ ಪ್ರಾರಂಭವಾಗಇರುವ ಬಿಸಿಎ. ಕೋರ್ಸಿನ್ನು ಉದ್ಘಾಟನೆ ವಿವಿಧ ಸಮಿತಿಗಳ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗಾಗಿ ನೂತನವಾಗಿ ಪ್ರಾರಂಭಿಸಿರುವ ಬಿಸಿಎ ಕೋರ್ಸ್ನ್ನು ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನವು ಅತ್ಯಂತ ಪ್ರಮುಖವಾದದ್ದು. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಜೀವನ ರೂಪಿಸಿಕೊಳ್ಳಬೇಕು. ಸಮಯವನ್ನು ಸದುಪಯೋಗಪಡಿಸಿಕೊಂಡು ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬೇಕೆಂದು ಹೇಳಿದರು.
ಈ ಕಾಲೇಜಿನಲ್ಲಿ ಯಾವುದೇ ರೀತಿಯ ಸೌಲಭ್ಯಗಳ ಅವಶ್ಯಕತೆ ಇದ್ದರು ತಕ್ಷಣ ಸಂಪರ್ಕಿಸಿ ನಾನು ಸ್ಪಂದಿಸುವೆ ವಿಧ್ಯಾರ್ಥಿಗಳು ವಿಧ್ಯಾಭ್ಯಾಸದಕಡೆ ಹೆಚ್ಚಿನ ಗಮನ ಹರಿಸಬೇಕು ತಂದೆ ತಾಯಿ ಗುರು ಹಿರಿಯರನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಧನರಾಜ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಿ.ಸಿ.ಎ. ಕೋರ್ಸ್ ನಮ್ಮ ಕಾಲೇಜಿನಲ್ಲಿ ತರಲಾಗಿದ್ದು ಈ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಈ ಕೋರ್ಸಿಗೆ ಹೆಚ್ಚು ಹೆಚ್ಚು ಪ್ರವೇಶ ಪಡೆದು ಉನ್ನತ ಹುದ್ದೆಯನ್ನು ಗಿಟ್ಟಿಸಿಕೊಳ್ಳಬೇಕೆಂದು ಹೇಳಿದರು.
ವಿದ್ಯಾರ್ಥಿನಿ ಪ್ರಿಯಾಂಕಾ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ವಿದ್ಯಾರ್ಥಿನಿ ವೈಷ್ಣವಿ ವಿಜಯಕುಮಾರ ಮತ್ತು ಸಂಗಡಿಗರು ನಾಡಗೀತೆ ಹಾಡಿದರು. ಡಾ. ಧನರಾಜ್ ತುಡಮೆ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ದಶವಂತ ಮಾರುತಿ ಪ್ರಾಸ್ತಾವಿಕ ಮಾತುಗಳನಾಡಿದರು..
ಕಾರ್ಯಕ್ರಮದಲ್ಲಿ ನೌಬಾದ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಶಿವಕುಮಾರ ಉಪ್ಪೆ, ಘೋಡಂಪಳ್ಳಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ತುಮಕುಂಟೆ ದೇವಿದಾಸ, ಡಾ. ನವರಂಗ ಮಾಣಿಕರಾವ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಹಾಲಪ್ಪಗೋಳ್ ಪೃಥ್ವಿರಾಜ್, ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕಿ ಶ್ರೀಮತಿ ಸವಿತಾ ಪಾಟೀಲ್, ಮನ್ನಳ್ಳಿಯ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಕಾಶಿಬಾಯಿ ಬಕಪ್ಪ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕನಕರಾಯ, ಮನ್ನಳ್ಳಿ ಮತ್ತು ನಾಗೋರಾ ಗ್ರಾಮ ಪಂಚಾಯತಿಯ ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಯವರು, ಅತಿಥಿ ಉಪನ್ಯಾಸಕರು, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮಧು ಜಿ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂದೀಪ ತಿವಾರಿ ವಂದಿಸಿದರು.