ಬೀದರ್

ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

ಬೀದರ, ಆಗಸ್ಟ್.22 :- 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ದಿನಾಂಕ: 21-08-2024 ರಿಂದ 21-09-2024 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಮೈಲೂರ ಬೀದರ ಇವರಿಗೆ ಸಂಪರ್ಕಿಸಬೇಕೆAದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!