ಸುಸ್ಥಿರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಿ:-ಕಿಶೋರ್ ಕುಮಾರ್ ದುಬೆ
ಬೀದರ:-ಗ್ರಾಮ ಪಂಚಾಯಿತಿಯ ಪ್ರತಿ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಕ್ರಮಬದ್ಧವಾಗಿ ಆಯೋಜಿಸುವ ಮೂಲಕ ಜನಸಾಮಾನ್ಯರ ಸುಸ್ಥಿರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡುವ ” ಗ್ರಾಮ ಪಂಚಾಯಿತಿ ಕಾರ್ಯಪಡೆ ಸಮಿತಿಯ ” ಪ್ರಮುಖ ಪಾತ್ರ ಇರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಕಿಶೋರ್ ಕುಮಾರ್ ದುಬೆ ತಿಳಿಸಿದರು .
ಜಿಲ್ಲಾ ಪಂಚಾಯತ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ “ಗ್ರಾಮ ಆರೋಗ್ಯ ತರಬೇತಿ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು .
ಈ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ,ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಗ್ರಾಮೀಣ ಅಭಿವೃದ್ಧಿ
ಮತ್ತು ಪಂಚಾಯತ್ ರಾಜ್ ಇಲಾಖೆಯ ಜಿಲ್ಲೆಯ ಎಂಟು ತಾಲೂಕಿನ ತಾಲೂಕ ಮಟ್ಟದ ಅಧಿಕಾರಿಗಳಿಗೆ ತರಬೇತಿ ಯೋಜನೆ ಮಾಡಲಾಯಿತು.
ಕ್ಷಯ ರೋಗ, ಅಪೌಷ್ಟಿಕತೆ,ಪೌಷ್ಟಿಕ ಆಹಾರ, ಸಾಂಕ್ರಾಮಿಕ ,ಅಸಾಂಕ್ರಾಮಿಕ್ ರೋಗಗಳು, ರಕ್ತದೊತ್ತಡ ,ಮಧುಮೇಹ ಕಾಯಿಲೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ,,ಮಹಿಳಾ ಮಕ್ಕಳ ರಕ್ಷಣೆಗೆ ವಿವಿಧ ಕಾಯ್ದೆಗಳು ಮತ್ತು ಯೋಜನೆಗಳು , ಭ್ರೂಣ ಹತ್ಯೆ ಮತ್ತು ಬಾಲ್ಯ ವಿವಾಹ ತಡೆಗಟ್ಟಲು ಕಾಯ್ದೆಗಳು, ಮಾನಸಿಕ ಆರೋಗ್ಯ , ಆರೋಗ್ಯ ಸುಧಾರಣೆಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆ ಬಗ್ಗೆ ಮಾಹಿತಿ ತಿಳಿಸಿ ಸಂವಾದ ಮಾಡಲಾಯಿತು.
ಚಿಕಿತ್ಸೆ ಅಗತ್ಯ ಇರುವವರಿಗೆ ಆಸ್ಪತ್ರೆಗೆ ಕಳಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮಕ್ಕಳು ಅಭಿವೃದ್ಧಿ ಇಲಾಖೆ ಜಂಟಿಯಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚಿಸಿರುವ ಗ್ರಾಮ ಪಂಚಾಯಿತಿ ಕಾರ್ಯಪಡೆ ಉಪಸಮಿತಿ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ ಜನರ ಆರೋಗ್ಯ ತಪಾಸಣೆ ಮಾಡಿ ವಿವಿಧ ಕಾಯಿಲೆ ಗುರುತಿಸಿ , ಅವರಿಗೆ ಸಮಯಕ್ಕೆ ಉಪಚಾರ ಮಾಡಲು ಆಸ್ಪತ್ರೆ ಕಳಿಸಿ ವಿವಿಧ ಯೋಜನೆ ಮುಖಾಂತರ ಆರೋಗ್ಯಕರ ಸಮಾಜ ನಿರ್ಮಿಸಲು ಗ್ರಾಮ ಪಂಚಾಯಿತಿ ಕಾರ್ಯಪಡೆ ಸಮಿತಿಯ ಪ್ರಮುಖ ಪಾತ್ರ ಇರುವುದರಿಂದ ಗ್ರಾಮ ಪಂಚಾಯಿತಿ ಕಾರ್ಯಪಡೆ ಸಮಿತಿಯ ಸದಸ್ಯರಾದ , ಗ್ರಾಮ ಪಂಚಾಯಿತಿ ಸದಸ್ಯರು ಆಶಾ ಕಾರ್ಯಕರ್ತರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಇರತಕ್ಕದ್ದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ಆಯೋಜನೆ ಮಾಡಲು ಅತ್ಯಾವಶ್ಯಕ ಇದೆ ಎಂದು ಹೇಳಿದರು,
ಆ ಉದ್ದೇಶದಿಂದ ಮುಂದಿನ ಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸಂಬಂಧಪಟ್ಟ ತರಬೇತಿ ಶಿಬಿರ ಆಯೋಜನೆ ಮಾಡಲು ತಿಳಿಸಿದ್ದಾರೆ .
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು .
ಈ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ,ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ತಾಲೂಕಿನ ವೀಕೇಂದ್ರಿಕೃತ ತರಬೇತಿ ಸಂಯೋಜಕರು ಭಾಗವಹಿಸಿದ್ದರು.