ಬೀದರ್

ಸೆಪ್ಟೆಂಬರ್.14 ರಂದು ಜಿಲ್ಲೆಯಲ್ಲಿ ಬೃಹತ್ ಲೋಕ ಅದಾಲತ್-ನ್ಯಾ.ಪ್ರಕಾಶ ಎ.ಬನಸೋಡೆ

ಬೀದರ, ಆಗಸ್ಟ್.23 :- ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್.14 ರಂದು ಬೀದರ ಜಿಲ್ಲೆಯಲ್ಲಿ ಬೃಹತ್ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣಗಳು ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದು ಹೇಳಿದರು.
ಈ ಹಿಂದೆ ಜುಲೈ.13, 2024 ರಂದು ರಾಷ್ಟ್ರೀಯ ಲೋಕ ಅದಾಲತಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯಾದ್ಯಾಂತ ಒಟ್ಟು 29,976 ಪ್ರಕರಣಗಳನ್ನು ಈ ಲೋಕ ಆದಲಾತ್‌ನಲ್ಲಿ ಇತ್ಯರ್ಥಗೊಳಿಸಲಾಗಿದೆ. 10,521 ಪೆಂಡಿಂಗನಲ್ಲಿನ ಪ್ರಕರಣಳು, 19,455 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿರುತ್ತದೆ. ಈ ಬಾರಿಯ ಲೋಕ ಅದಾಲತನಲ್ಲಿ ನ್ಯಾಯಾಲಯದಲ್ಲಿ ಬಾಕಿ (ಪೇಂಡಿಂಗ) ಇರುವ ಪ್ರಕರಣಗಳನ್ನು ಹೆಚ್ಚು ಹೆಚ್ಚು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ. ಕಳೆದ ಲೋಕ ಅದಾಲತಗಿಂತ ಈ ಬಾರಿಯ ಲೋಕ ಅದಾಲತನಲ್ಲಿ ಹೆಚ್ಚು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ. ಇದಕ್ಕೆಲ್ಲ ಮಾಧ್ಯಮಗಳು ಹೆಚ್ಚು ಹೆಚ್ಚು ಪ್ರಚಾರವನ್ನು ಸಾರ್ವಜನಿಕರಿಗೆ ನೀಡಬೇಕೆಂದು ಹೇಳಿದರು.
ಆಗಸ್ಟ್.22, 2024 ರ ಪ್ರಕಾರ ಬೀದರ ಜಿಲ್ಲೆಯಲ್ಲಿ ಒಟ್ಟು 28,371 ಪ್ರಕರಣಗಳು ಪೆಂಡಿಂಗ ಇದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಲಾಗಿದೆ. ಪ್ರಕರಣ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ ಸಿಗಲಿದೆ ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಜಿಲ್ಲೆಯ ಹೆಚ್ಚಿನ ಜನರು ಈ ಲೋಕ ಆದಾಲತನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳಾದ ಜಗದಿಶ್ವರ ದೊರೆ, ಆಕಾಶ ಸಜ್ಜನ, ಜೀವನ, ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!