ಬೀದರ್

ಈಶ್ವರ ಖಂಡ್ರೆ ಮತ್ತು ರಹಿಂಖಾನ್ ಸಚಿವದ್ವಯರಿಗೆ ಜು. 23 ರಂದು ಸನ್ಮಾನ

ಬೀದರ: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ ಸಾಧಕರಿಗೆ ಹಲವು ವರ್ಷಗಳಿಂದ ಅಭಿನಂದನಾ ಸಮಾರಂಭದ ಮೂಲಕ ಸನ್ಮಾನಿಸುತ್ತ ಬರುತ್ತಿದ್ದು, ಈ ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಒದಗಿ ಬಂದಿದ್ದು ಹೆಮ್ಮೆಯ ಸಂಗತಿ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಖಾತೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹಿಂಖಾನ್ ಅವರಿಗೆ ಜುಲೈ 23 ರಂದು ರವಿವಾರ ಬೆ. 11 ಗಂಟೆಗೆ ಜನವಾಡಾ ರಸ್ತೆಯಲ್ಲಿರುವ ಝಿರಾ ಕನ್ವೆನ್‌ಶನ್ ಹಾಲ್‌ನಲ್ಲಿ ಸಮಿತಿ ವತಿಯಿಂದ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಆದ್ದರಿಂದ ಜಿಲ್ಲೆಯ ಸಂಘ-ಸAಸ್ಥೆಗಳ ಪ್ರಮುಖರು ಪಕ್ಷಾತೀತವಾಗಿ ಆಗಮಿಸಿ ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸಮಿತಿಯ ಅಧ್ಯಕ್ಷರಾದ ಡಾ. ಚನ್ನಬಸಪ್ಪ ಹಾಲಹಳ್ಳಿ ತಿಳಿಸಿದರು.
ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಮಿತಿಯ ಸದಸ್ಯರಾದ ಬಿ.ಜಿ.ಶೆಟಕಾರ ಮಾತನಾಡಿ ಅಂದು ನಡೆಯುವ ಸಮಾರಂಭದ ದಿವ್ಯ ಸಾನಿಧ್ಯವನ್ನು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮತ್ತು ಬಸವಕಲ್ಯಾಣ ಬಸವ ಮಹಾಮನೆ ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಡಾ. ಸಿದ್ಧರಾಮ ಬೆಲ್ದಾಳ ಶರಣರು ವಹಿಸುವರು. ಅಧ್ಯಕ್ಷತೆಯನ್ನು ನಾಗರಿಕ ಅಭಿನಂದನಾ ಸಮಿತಿಯ ಅಧ್ಯಕ್ಷ ಡಾ. ಚನ್ನಬಸಪ್ಪ ಹಾಲಹಳ್ಳಿ ವಹಿಸುವರು. ಅಭಿನಂದನಾ ನುಡಿಗಳನ್ನು ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ.ಮೂಲಿಮನಿ ನುಡಿಯುವರು. ಗೌರವ ಅತಿಥಿಗಳಾಗಿ ಕರ್ನಾಟಕ ರಾಷ್ಟಿçÃಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಕಾರ, ಹೈ.ಕ. ಶಿಕ್ಷಣ ಸಂಸ್ಥೆಯ ಕಲಬುರಗಿಯ ಆಡಳಿತ ಮಂಡಳಿ ಸದಸ್ಯ ರಜನೀಶ ವಾಲಿ ಆಗಮಿಸುವರು. ಸನ್ಮಾನಗಳಿಂದ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡು ಈ ಭಾಗದ ಅಭಿವೃದ್ಧಿಗೆ ಪಣತೊಟ್ಟು ದುಡಿಯುತ್ತಾರೆ ಎನ್ನುವ ಆಶಾಭಾವ ನಮ್ಮಲ್ಲಿದೆ. ಈ ನಿಟ್ಟಿನಲ್ಲಿ ಸಚಿವದ್ವಯರಿಗೆ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.
ಸಮಿತಿಯ ಸಂಯೋಜಕ ಡಾ. ಜಗನ್ನಾಥ ಹೆಬ್ಬಾಳೆ ಮಾತನಾಡಿ ಎರಡ್ಮೂರು ದಶಕಗಳಿಂದ ತಮ್ಮ ಯಶಸ್ವಿ ಸುದೀರ್ಘ ರಾಜಕೀಯ ಪಯಣ ಮುಂದುವರೆಸಿಕೊAಡು ಬರುತ್ತಿರುವ ಸಚಿವರಾದ ಈಶ್ವರ ಖಂಡ್ರೆ ಹಾಗೂ ರಹಿಂಖಾನ್ ಅವರು ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವಸ್ಥಾನ ಪಡೆದುಕೊಂಡು ಬೀದರ ಜಿಲ್ಲೆಯ ಹೆಸರು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಬೆಳೆಸಿರುವುದು ಅಭಿನಂದನೀಯ. ಈ ಮಹನೀಯರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಾಗಲಿ. ರಾಜ್ಯ ರಾಷ್ಟçಮಟ್ಟದಲ್ಲಿ ಇನ್ನೂ ಹೆಚ್ಚಿನ ಹುದ್ದೆಗಳನ್ನು ಅಲಂಕರಿಸಿ ಉತ್ತರೋತ್ತರವಾಗಿ ಬೆಳೆಯಲಿ ಎಂಬ ಸದಾಶಯದೊಂದಿಗೆ ಜು. 23 ರಂದು ಸುಮಾರು 50 ಸಂಘಟನೆಗಳ ಸಹಕಾರದೊಂದಿಗೆ ಸನ್ಮಾನ ಸಮಾರಂಭ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ನಾಗರಿಕರು, ಶಿಕ್ಷಣ ಸಂಸ್ಥೆಗಳ ಪ್ರಮುಖರು, ಕನ್ನಡಪರ ಸಂಘಟನೆಗಳವರು, ಎನ್‌ಜಿಓ ಪ್ರಮುಖರು ಹಾಗೂ ವ್ಯಾಪಾರಿ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭ ಯಶಸ್ವಿಗೊಳಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಅಮೃತರಾವ ಚಿಮಕೋಡೆ, ಪಂಡಿತ ಚಿದ್ರಿ, ಡಾ. ವೈಜಿನಾಥ ಕಮಠಾಣೆ, ಶಾಂತಲಿAಗ ಸಾವಳಗಿ, ಅಶೋಕ ಹೆಬ್ಬಾಳೆ ಭಾಗವಹಿಸಿ ಮಾತನಾಡಿದರು. ಇದೇ ವೇಳೆ ಮಲ್ಲಿಕಾರ್ಜುನ ಸ್ವಾಮಿ, ಡಾ. ರಾಜಕುಮಾರ ಹೆಬ್ಬಾಳೆ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ ಸೇರಿದಂತೆ ಇನ್ನಿತರರು ಹಾಜರಿದ್ದರು.

Ghantepatrike kannada daily news Paper

Leave a Reply

error: Content is protected !!