ಉತ್ತಮ ಆರೋಗ್ಯಕ್ಕೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ
ಬೀದರ್: ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಹೇಳಿದರು.
ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೆಹರೂ ಯುವ ಕೇಂದ್ರ ಹಾಗೂ ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಿವೆ ಎಂದು ತಿಳಿಸಿದರು.
ಹಾಕಿ ದಂತ ಕಥೆ ಮೇಜರ್ ಧ್ಯಾನಚಂದ್ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಕಾಶೀನಾಥ ಗೌರಶೆಟ್ಟಿ, ಅಭಿವೃದ್ಧಿ ಅಧಿಕಾರಿ ದೇವಪ್ಪ, ಸದಸ್ಯ ನರೇಂದ್ರ ಕೋಳಿ, ಚಂದ್ರಕಾಂತ ಗಂಗಶೆಟ್ಟಿ, ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಮುಬಾರಕರ್ ಮಂದಕನಳ್ಳಿ, ಸಚಿನ್, ಶ್ರೀನಿವಾಸ್, ಶ್ರೀಮಂತ ಇದ್ದರು.